PGCIL Recruitment 2020: ಕ್ಷೇತ್ರ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಕ್ಷೇತ್ರ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪಿಜಿಸಿಐಎಲ್ ನಲ್ಲಿ ಉದ್ಯೋಗಾವಕಾಶ...ಫೆ,15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಕ್ಷೇತ್ರ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,80,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ https://www.powergridindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Power Grid Corporation Of India Limited recruitment 2020 notification has been released for field engineer posts. Interested candidates can apply through online before February 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+