ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ನಲ್ಲಿ 137 ಕ್ಷೇತ್ರ ಮೇಲ್ವಿಚಾರಕ ಮತ್ತು ಕ್ಷೇತ್ರ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ನೇಮಕಾತಿ ಬಗೆಗೆ ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್, ಬಿ.ಎಸ್ಸಿ ಮತ್ತು ಡಿಪ್ಲೋಮಾ ಇನ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾನಿಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಆಗಸ್ಟ್ 27,2021ರ ಅನ್ವಯ ಗರಿಷ್ಟ 29 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರಿಂದ 30,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಕ್ಷೇತ್ರ ಇಂಜಿನಿಯರ್ ಹುದ್ದೆಗಳಿಗೆ 400/-ರೂ ಮತ್ತು ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಟೆಸ್ಟ್, ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://powergridindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











