PGCIL Recruitment 2022 : 16 ಡಿಪ್ಲೋಮಾ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 16 ಡಿಪ್ಲೋಮಾ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 21,2022 ರಿಂದ ಏಪ್ರಿಲ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಪಿಜಿಸಿಐಎಲ್ ನಲ್ಲಿ 16 ಹುದ್ದೆಗಳ ನೇಮಕಾತಿ

PGCIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಿಪ್ಲೋಮಾ ಟ್ರೈನಿ ಹುದ್ದೆಗಳಿಗೆ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

PGCIL ನೇಮಕಾತಿ 2022 ವಯೋಮಿತಿ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಿಪ್ಲೋಮಾ ಟ್ರೈನಿ ಹುದ್ದೆಗಳಿಗೆ ಏಪ್ರಿಲ್ 20,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

PGCIL ನೇಮಕಾತಿ 2022 ವೇತನದ ವಿವರ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಿಪ್ಲೋಮಾ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 1,17,500/-ರೂಗಳ ವರೆಗೆ ವೇತನ ನೀಡಲಾಗುವುದು.

PGCIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಿಪ್ಲೋಮಾ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

PGCIL ನೇಮಕಾತಿ 2022 ಅರ್ಜಿ ಶುಲ್ಕ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಿಪ್ಲೋಮಾ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿಸೈನಿಕ/ವಿಭಾಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

PGCIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡಿಪ್ಲೋಮಾ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.powergrid.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 21,2022 ರಿಂದ ಏಪ್ರಿಲ್ 20,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳಿಗೆ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
PGCIL recruitment 2022 notification has been released for 16 diploma trainee Posts. Interested candidates can apply before April 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X