ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 325 ಮ್ಯಾನೇಜರ್ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 325 ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಅಧಿಕಾರಿ, ಸೀನಿಯರ್ ಮ್ಯಾನೇಜರ್ ಹೀಗೆ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಮಾರ್ಚ್ 2.2019 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಧಿಕಾರಿ, ಸೀನಿಯರ್ ಮ್ಯಾನೇಜರ್
Organisation ಪಂಜಾಬ್ ನ್ಯಾಷನಲ್ ಬ್ಯಾಂಕ್
Educational Qualification ಎಂಸಿಎ/ಬಿ.ಇ/ಬಿಟೆಕ್ ಪದವಿಯನ್ನು ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ / ಕಂಪ್ಯೂಟರ್ ಸೈನ್ಸ್ ಮತ್ತು ಟೆಕ್ನಾಲಜಿ / ಇನ್ಫರ್ಮೇಶನ್ ಟೆಕ್ನಾಲಜಿ , ಸಿಎ/ ಐಸಿಡಬ್ಲ್ಯೂಎ/ಎಂಬಿಎ ಅಥವಾ ಪಿಜಿಡಿಎಂ /ಸ್ನಾತಕೋತ್ತರ ಪದವಿ / ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ಅಧಿಕಾರಿ- 23,700/- ರಿಂದ 42,020/-ರೂ ಮತ್ತು ಸೀನಿಯರ್ ಮ್ಯಾನೇಜರ್- 42,020/-ರಿಂದ 51,490/-ರೂ
Application Start Date February 14, 2019
Application End Date March 2, 2019

ವಿದ್ಯಾರ್ಹತೆ:

ಅಧಿಕಾರಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಸಿಎ/ಬಿ.ಇ/ಬಿಟೆಕ್ ಪದವಿಯನ್ನು ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ / ಕಂಪ್ಯೂಟರ್ ಸೈನ್ಸ್ ಮತ್ತು ಟೆಕ್ನಾಲಜಿ / ಇನ್ಫರ್ಮೇಶನ್ ಟೆಕ್ನಾಲಜಿ ಯನ್ನು ಭಾರತ ಸರ್ಕಾರದಿಂದ ಅಥವಾ ಅದರ ಅಧೀನದಲ್ಲಿ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಲ್ಲಿ ಮಾಡಿರಬೇಕು.

ಸೀನಿಯರ್ ಮ್ಯಾನೇಜರ್:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎ/ ಐಸಿಡಬ್ಲ್ಯೂಎ/ಎಂಬಿಎ ಅಥವಾ ಪಿಜಿಡಿಎಂ (ಫಿನಾನ್ಸ್ ನಲ್ಲಿ ಸ್ಪೆಶಲೈಸೇಶನ್) ಅಥವಾ ಅದಕ್ಕೆ ಸಮನಾದ ಸ್ನಾತಕೋತ್ತರ ಪದವಿ / ಡಿಪ್ಲೋಮಾ ಅನ್ನು ಎಐಸಿಟಿಇ ಇಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಮಾಡಿರಬೇಕು.

ವಯೋಮಿತಿ:

ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2019ಕ್ಕೆ ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 37 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವೇತನದ ವಿವರ:

ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700/- ರಿಂದ 42,020/-ರೂ ವೇತನ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/-ರಿಂದ 51,490/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಓಬಿಸಿ / ಮಾಜಿ ಸೈನಿಕ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಬಗೆಗೆ ಮಾಹಿತಿಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Panjab National Bank recruitment 2019 notification has been released on official website for the recruitment of 325 manager and officer posts.Interested candidates can apply through online before march 2nd 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+