PNB Recruitment 2022 : 103 ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 103 ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಆಗಸ್ಟ್ 4,2022 ರಿಂದ ಆಗಸ್ಟ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 103 ಹುದ್ದೆಗಳ ನೇಮಕಾತಿ

PNB ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ವ್ಯವಸ್ಥಾಪಕ - 80 ಹುದ್ದೆಗಳು
ಅಧಿಕಾರಿ - 23 ಹುದ್ದೆಗಳು
ಒಟ್ಟು 103 ಹುದ್ದೆಗಳು

PNB ನೇಮಕಾತಿ 2022 ವಿದ್ಯಾರ್ಹತೆ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ಬಿ.ಇ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

PNB ನೇಮಕಾತಿ 2022 ವಯೋಮಿತಿ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ಜುಲೈ 1,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

PNB ನೇಮಕಾತಿ 2022 ವೇತನ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 69,810/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 103 ಹುದ್ದೆಗಳ ನೇಮಕಾತಿ

PNB ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ/ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

PNB ನೇಮಕಾತಿ 2022 ಅರ್ಜಿ ಶುಲ್ಕ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1003/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

PNB ನೇಮಕಾತಿ 2022 ಅರ್ಜಿ ಸಲ್ಲಿಕೆ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://pnbindia.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಆಗಸ್ಟ್ 4,2022 ರಿಂದ ಆಗಸ್ಟ್ 30,2022ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬಹುದು.

ಕಚೇರಿ ವಿಳಾಸ :
CHIEF MANAGER (RECRUITMENT SECTION), HRD DIVISION, PUNJAB NATIONAL BANK, CORPORATE OFFICE, PLOT NO 4, SECTOR 10, DWARKA, NEW DELHI -110075.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Punjab national bank recruitment 2022 notification has been released for 103 manager and officer posts. Interested candidates can apply before August 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X