ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 145 ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 22,2022 ರಿಂದ ಮೇ 7,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.
PNB ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :
ವ್ಯವಸ್ಥಾಪಕ - 140 ಹುದ್ದೆಗಳು
ಹಿರಿಯ ವ್ಯವಸ್ಥಾಪಕ - 5 ಹುದ್ದೆಗಳು
ಒಟ್ಟು 145 ಹುದ್ದೆಗಳು
PNB ನೇಮಕಾತಿ 2022 ವಿದ್ಯಾರ್ಹತೆ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಸಿಎ, ಸಿಎಂಎ, ಐಸಿಡಬ್ಲ್ಯೂಎ, ಸಿಎಫ್ಎ, ಪದವಿ, ಪೋಸ್ಟ್ ಗ್ರಾಜುಯೇಶನ್ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
PNB ನೇಮಕಾತಿ 2022 ವಯೋಮಿತಿ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 35 ರಿಂದ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
PNB ನೇಮಕಾತಿ 2022 ವೇತನ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,170/- ರಿಂದ 78,230/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
PNB ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
PNB ನೇಮಕಾತಿ 2022 ಅರ್ಜಿ ಶುಲ್ಕ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
PNB ನೇಮಕಾತಿ 2022 ಅರ್ಜಿ ಸಲ್ಲಿಕೆ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://pnbindia.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 7,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











