ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಇಂಟರ್‌ನಲ್ ಒಂಬುಡ್ಸ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಏಪ್ರಿಲ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

PNB ನೇಮಕಾತಿ 2022 ವಿದ್ಯಾರ್ಹತೆ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಇಂಟರ್‌ನಲ್ ಒಂಬುಡ್ಸ್‌ಮ್ಯಾನ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
PNB ನೇಮಕಾತಿ 2022 ವಯೋಮಿತಿ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಇಂಟರ್‌ನಲ್ ಒಂಬುಡ್ಸ್‌ಮ್ಯಾನ್ ಹುದ್ದೆಗಳಿಗೆ ಮಾರ್ಚ್ 31,2022ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

PNB ನೇಮಕಾತಿ 2022 ವೇತನ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಇಂಟರ್‌ನಲ್ ಒಂಬುಡ್ಸ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
PNB ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಇಂಟರ್‌ನಲ್ ಒಂಬುಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

PNB ನೇಮಕಾತಿ 2022 ಅರ್ಜಿ ಶುಲ್ಕ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಇಂಟರ್‌ನಲ್ ಒಂಬುಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 2,000/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
PNB ನೇಮಕಾತಿ 2022 ಅರ್ಜಿ ಸಲ್ಲಿಕೆ :
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಇಂಟರ್‌ನಲ್ ಒಂಬುಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.pnbindia.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಏಪ್ರಿಲ್ 6,2022 ರಿಂದ ಏಪ್ರಿಲ್ 20,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.
ಕಚೇರಿ ವಿಳಾಸ:
General Manager-HRMD, Punjab National Bank, HO: HRMD, Sector-10, Dwarka, New Delhi-110075.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











