ಪೋಸೋಕೋ ನೇಮಕಾತಿ: ಎಕ್ಸಿಕ್ಯುಟಿವ್ ಮತ್ತು ಅಸಿಸ್ಟೆಂಟ್ ಆಫೀಸರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಸಿಸ್ಟಮ್ ಆಪರೇಷನ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಎಕ್ಸಿಕ್ಯುಟಿವ್ ಟ್ರೈನಿ (ಹೆಚ್‌ಆರ್), ಅಸಿಸ್ಟೆಂಟ್ ಆಫೀಸರ್ ಟ್ರೈನಿ (ಪಿಆರ್‌) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪವರ್ ಇಂಡಸ್ಟ್ರಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಜೂನ್ 20,2019 ರೊಳಗೆ ಸಲ್ಲಿಸಬಹುದು.

ಪವರ್ ಇಂಡಸ್ಟ್ರಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಎಕ್ಸಿಕ್ಯುಟಿವ್ ಟ್ರೈನಿ (ಹೆಚ್‌ಆರ್), ಅಸಿಸ್ಟೆಂಟ್ ಆಫೀಸರ್ ಟ್ರೈನಿ (ಪಿಆರ್‌)
Organisation ಪವರ್ ಸಿಸ್ಟಮ್ ಆಪರೇಷನ್ ಕಾರ್ಪೋರೇಷನ್ ಲಿಮಿಟೆಡ್
Educational Qualification ಸ್ನಾತಕೋತ್ತರ ಪದವಿ / ಸ್ನಾತಕೋತ್ತರ ಪದವಿ ಡಿಪ್ಲೋಮ / ಎಂಬಿಎ ಹೆಚ್‌ಆರ್‌/ ಪರ್ಸನಲ್ ಮ್ಯಾನೇಜ್ಮೆಂಟ್ / ಇಂಡಸ್ಟ್ರಿಯಲ್ ರಿಲೇಶನ್ಸ್ / ಸೋಶಿಯಲ್ ವರ್ಕ್ ,ಪದವಿ ಜೊತೆಗೆ ಸ್ನಾತಕೋತ್ತರ ಪದವಿ / ಸ್ನಾತಕೋತ್ತರ ಪದವಿ ಡಿಪ್ಲೋಮ
Job Location ಭಾರತದೆಲ್ಲೆಡೆ
Salary Scale ಎಕ್ಸಿಕ್ಯುಟಿವ್ ಟ್ರೈನಿ - 60,000/-ರಿಂದ 1,80,000/-ರೂ, ಅಸಿಸ್ಟೆಂಟ್ ಟ್ರೈನಿ - 50,000/- ರಿಂದ 1,60,000/-ರೂ
Application Start Date March 13, 2019
Application End Date June 20, 2019

ಶೈಕ್ಷಣಿಕ ವಿದ್ಯಾರ್ಹತೆ:

ಎಕ್ಸಿಕ್ಯುಟಿವ್ ಟ್ರೈನಿ (ಹೆಚ್‌ಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ / ಸ್ನಾತಕೋತ್ತರ ಪದವಿ ಡಿಪ್ಲೋಮ / ಎಂಬಿಎ ಹೆಚ್‌ಆರ್‌/ ಪರ್ಸನಲ್ ಮ್ಯಾನೇಜ್ಮೆಂಟ್ / ಇಂಡಸ್ಟ್ರಿಯಲ್ ರಿಲೇಶನ್ಸ್ / ಸೋಶಿಯಲ್ ವರ್ಕ್ ಅನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಶೇ.60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅಸಿಸ್ಟೆಂಟ್ ಆಫೀಸರ್ ಟ್ರೈನಿ (ಪಿಆರ್‌) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಜೊತೆಗೆ ಸ್ನಾತಕೋತ್ತರ ಪದವಿ ಅಥವಾ ಸ್ನಾತಕೋತ್ತರ ಪದವಿ ಡಿಪ್ಲೋಮ ಅನ್ನು ಸಮೂಹ ಸಂವಹನ/ ಪಬ್ಲಿಕ್ ರಿಲೇಶನ್ಸ್ / ಪತ್ರಿಕೋದ್ಯಮ ಅನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಲ್ಲಿ ಶೇ.60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ 31.7.2019ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/-ರಿಂದ 1,80,000/-ರೂ ಮತ್ತು
ಅಸಿಸ್ಟೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/- ರಿಂದ 1,60,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಯುಜಿಸಿ ಎನ್‌ಇಟಿ ಜೂನ್ 2019ರ ಅಂಕಗಳ ಆಧಾರದ ಮೇಲೆ ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಪವರ್ ಇಂಡಸ್ಟ್ರಿಯ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಜೂನ್ 20,2019 ರೊಳಗೆ ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
POSOCO recruitment notification has been released on official website for the recruitment of various executive posts.Interested candidates can apply through online before 20th june 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+