ಪ್ರಸಾರ್‌ ಭಾರತಿ ನೇಮಕಾತಿ 60 ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಸಾರ್‌ ಭಾರತಿ ನೇಮಕಾತಿ 60 ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಪ್ರಸಾರ್ ಭಾರತಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೆಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮಾಡುವ ಮೂಲಕ ಆಗಸ್ಟ್ 6,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪ್ರಸಾರ್ ಭಾರತಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮಾರ್ಕೆಟಿಂಗ್ ಎಕ್ಸಿಕ್ಯುಟಿವ್
Organisation ಪ್ರಸಾರ್‌ ಭಾರತಿ
Educational Qualification ಎಂಬಿಎ ಅಥವಾ ಸ್ನಾತಕೋತ್ತರ ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ಮಾರ್ಕೆಟಿಂಗ್ ಎಕ್ಸಿಕ್ಯುಟಿವ್-ತಿಂಗಳಿಗೆ 30,000/-ರೂ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಗ್ರೇಡ್ -1- ತಿಂಗಳಿಗೆ 42,000/-ರೂ
Application Start Date July 12, 2019
Application End Date August 6, 2019


ಶೈಕ್ಷಣಿಕ ವಿದ್ಯಾರ್ಹತೆ :

ಎಂಬಿಎ ಅಥವಾ ಸ್ನಾತಕೋತ್ತರ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 6,2019ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಗ್ರೇಡ್ -1 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಪ್ರಸಾರ್ ಭಾರತಿಯ ಅಧಿಕೃತ ವೆಬ್‌ಸೈಟ್‌ http://prasarbharati.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 6,2019ರೊಳಗೆ ಕಳುಹಿಸಬಹುದು ಅಥವಾ ಮೇಲ್ ಮಾಡುವ ಮೂಲಕ ಕೂಡ ಆರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Prasar bharati recruitment 2019 notification has been released on official website for the recruitment of 60 marketing executives posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+