96 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,ರಾಯಚೂರು ಇಲ್ಲಿಗೆ ಒಟ್ಟು 96 ಭೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಬೋಧಕರು, ಹಿರಿಯ ಸ್ಥಾನಿಕರು ಮತ್ತು ಕಿರಿಯ ಸ್ಥಾನಿಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಭರ್ತಿ ಮಾಡುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೈದ್ರಾಬಾದ್ ಕರ್ನಾಟಕ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಹುದ್ದೆಗಳ ಬಗೆಗೆ ಮತ್ತಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ:

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ:

ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿಯ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಖಾಲಿ ಹುದ್ದೆಗಳ ವಿವರ :

ಖಾಲಿ ಹುದ್ದೆಗಳ ವಿವರ :


ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ವಿವರವನ್ನು ಮೇಲಿನ ದೃಶ್ಯದಲ್ಲಿ ನೀಡಲಾಗಿದೆ.

ವೇತನದ ವಿವರ :
 

ವೇತನದ ವಿವರ :

ಹಿರಿಯ ಸ್ಥಾನಿಕರು ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ, ಕಿರಿಯ ಸ್ಥಾನಿಕರು ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ಮತ್ತು ಬೋಧಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕದ ವಿವರ :

ಅರ್ಜಿ ಶುಲ್ಕದ ವಿವರ :

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ ? :

ಅರ್ಜಿ ಸಲ್ಲಿಸುವುದು ಹೇಗೆ ? :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಫಾರ್ಮ್ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಬೋಧಕ ಹುದ್ದೆಗಳಿಗೆ ಸೆಪ್ಟೆಂಬರ್ 26,2019ರ ಸಂಜೆ 5 ಗಂಟೆಯೊಳಗಾಗಿ ನಿರ್ದೇಶಕರು,ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಯಚೂರು ಇಲ್ಲಿಗೆ ಅರ್ಜಿಯನ್ನು ಕಳುಹಿಸಬೇಕಿರುತ್ತದೆ ಮತ್ತು ಬೋಧಕೇತರ ಹುದ್ದೆಗಳಿಗೆ ಸೆಪ್ಟೆಂಬರ್ 27,2019ರ ಸಂಜೆ 5 ಗಂಟೆಯೊಳಗಾಗಿ ನಿರ್ದೇಶಕರು,ರಿಮ್ಸ್ ರಾಯಚೂರು ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.

ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಸೆಪ್ಟೆಂಬರ್ 18,2019

ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 26,2019

ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 27,2019

ಅಭ್ಯರ್ಥಿಗಳು ಬೋಧಕ ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

ಮತ್ತು ಬೋಧಕೇತರ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Raichur institute of medical sciences recruitment 2019 has been released and invited applications for 96 teaching- non-teaching posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X