Raichur Zilla Panchayat Recruitment 2022 : 11 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ 11 ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೂಲಕ ನವೆಂಬರ್ 24,2022 ರಿಂದ ಡಿಸೆಂಬರ್ 3,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರಾಯಚೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಯಲ್ಲಿ ಉದ್ಯೋಗಾವಕಾಶ

Raichur Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ರಾಯಚೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಡಿಪ್ಲೋಮಾ, ಬಿ.ಇ/ಬಿ.ಟೆಕ್, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

 

Raichur Zilla Panchayat ನೇಮಕಾತಿ 2022 ವಯೋಮಿತಿ :

ರಾಯಚೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Raichur Zilla Panchayat ನೇಮಕಾತಿ 2022 ವೇತನ :

ರಾಯಚೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/- ರಿಂದ 24,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Raichur Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಯಚೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Raichur Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

ರಾಯಚೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Raichur Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ರಾಯಚೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://zpraichur.kar.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 24 ರಿಂದ ಡಿಸೆಂಬರ್ 3,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Raichur zilla panchayat recruitment 2022 notification has been released for 11 technical assistant posts. Apply before december 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X