ರೈಲ್ವೆ ವೀಲ್ ಫ್ಯಾಕ್ಟರಿ ನೇಮಕಾತಿ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳನ್ನು ವಿವಿಧ 59 ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ನಿರ್ವಹಿಸಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ6,2019 ರ ಸಂಜೆ 7 ಗಂಟೆಯೊಳಗೆ ಕಳುಹಿಸಬಹುದು.

| CRITERIA | DETAILS |
| Name Of The Posts | ನಿವೃತ್ತಿ ಹುದ್ದೆಗಳು |
| Organisation | ರೈಲ್ವೆ ವೀಲ್ ಫ್ಯಾಕ್ಟರಿ |
| Job Location | ಬೆಂಗಳೂರು |
| Application End Date | May 6, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಿರುವ ಅನುಭವವನ್ನು ಹೊಂದಿರಬೇಕು
ವಯೋಮಿತಿ:
ಈ ಹುದ್ದೆಗಳಿಗೆ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಧಿಕೃತ ವೆಬ್‌ಸೈಟ್
https://rwf.indianrailways.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 6,2019 ರ ಸಂಜೆ 7 ಗಂಟೆಯೊಳಗೆ ಕಳುಹಿಸಬಹುದು.
ಕಚೇರಿಯ ವಿಳಾಸ:
ಸೀನಿಯರ್ ಪರ್ಸನಲ್ ಆಫೀಸರ್ -II,
ರೈಲ್ ವೀಲ್ ಫ್ಯಾಕ್ಟರಿ,
ಯಲಹಂಕ,
ಬೆಂಗಳೂರು -560064
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











