ರಾಮನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 6 ಬೆರಳಚ್ಚುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಮನಗರ ಘಟಕದಲ್ಲಿ ಹೊಸದಾಗಿ ಸೃಜಿಸಲಾದ ನ್ಯಾಯಾಲಯಗಳಿಗೆ 6 ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಆನ್ ಲೈನ್ ನಲ್ಲಿ ದಿನಾಂಕ 1.02.2019 ರಿಂದ 15.02.2019 ರವರೆಗೆ ಮಾತ್ರ ಸಲ್ಲಿಸಬಹುದು.

ರಾಮನಗರ  ಜಿಲ್ಲಾ ನ್ಯಾಯಾಲಯದ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಬೆರಳಚ್ಚುಗಾರ
Organisation ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Job Location ರಾಮನಗರ
Salary Scale ಬೆರಳಚ್ಚುಗಾರ-ತಿಂಗಳಿಗೆ 21,400/- ರಿಂದ42,000/- ರೂ
Application Start Date February 1, 2019
Application End Date February 15, 2019

ವಿದ್ಯಾರ್ಹತೆ:

ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಕಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯನ್ನು ಅಧಿಸೂಚನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ಹುದ್ದೆಗಳ ವರ್ಗೀಕರಣ:

ಬೆರಳಚ್ಚುಗಾರ: 6 ಹುದ್ದೆಗಳು

ಮೀಸಲಾತಿಇತರೆಮಹಿಳೆಗ್ರಾಮೀಣಕ.ಮಾ.ಅಒಟ್ಟು
ಸಾಮಾನ್ಯ ಅಭ್ಯರ್ಥಿ 01010103
ಪರಿಶಿಷ್ಟ ಜಾತಿ 01 01
ಪ್ರವರ್ಗ-I01 01
ಪ್ರವರ್ಗ-II (A) 01 01
ಒಟ್ಟು0101030106
ವಿಶೇಷ ಸೂಚನೆ: ಕ.ಮಾ.ಅ = ಕನ್ನಡ ಮಾಧ್ಯಮ ಅಭ್ಯರ್ಥಿ

ವೇತನದ ವಿವರ:

ಬೆರಳಚ್ಚುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ
ತಿಂಗಳಿಗೆ 21,400/- ರಿಂದ42,000/- ರೂ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

ವಯೋಮಿತಿ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿದ ದಿನಾಂಕದಂದು ಕನಿಷ್ಟ 18ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಗರಿಷ್ಟ ವಯೋಮಿತಿ:

ಸಾಮಾನ್ಯ ವರ್ಗ:35ವರ್ಷ
2A,2B,3A,3B:38ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ-1:40ವರ್ಷ

ಅಭ್ಯರ್ಥಿಗಳು ಈ ಅಧಿಸೂಚನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು ಮತ್ತು ಸರಕಾರಿ ಸೇವೆಯಲ್ಲಿರುವವರೆಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಆಯ್ಕೆ ವಿಧಾನ:

ಬೆರಳಚ್ಚುಗಾರರು ಹುದ್ದೆಗಳಿಗೆ 15 ನಿಮಿಷಗಳ ಉಕ್ತಲೇಖನವನ್ನು ಬೆರಳಚ್ಚುಪಡಿಸುವ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುವುದು.
ಬೆರಳಚ್ಚುಗಾರರ ಹುದ್ದೆಗೆ 1:5ರ ಅನುಪಾತದಲ್ಲಿ, ನಿಗಧಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ, ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗುವುದು, ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗುವುದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಸಾಮಾನ್ಯ ಅರ್ಹತೆ, ಪ್ರವರ್ಗ- 1,ಪ್ರವರ್ಗ- 2A, 2B,3A,3B ಅಭ್ಯರ್ಥಿಗಳಿಗೆ
200/-ರೂ
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ -
100/-ರೂ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/ramanagara-onlinerecruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Ramnagara District Court has invited application for the post of 6 typist posts. Interested candidates can apply through online before 15th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X