ರಾಮನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ 2019 : 5 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಮನಗರ ಜಿಲ್ಲಾ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 5 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಸಕ್ತ ಅರ್ಹ ಅಭ್ಯರ್ಥಿಗಳುಆಗಸ್ಟ್ 30,2019ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರಾಮನಗರ  ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ರಾಮನಗರ ಜಿಲ್ಲೆ (ಕರ್ನಾಟಕ)
Salary Scale ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ
Application Start Date August 5, 2019
Application End Date August 30, 2019

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಡಿಪ್ಲೋಮಾ ಇನ್ ಸೆಕ್ರೆಟೇರಿಯಲ್ /ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ ವಯೋಮಿತಿಯ ವಿವರ : ಸಾಮಾನ್ಯ ವರ್ಗ ಗರಿಷ್ಠ 35 ವರ್ಷ, ಪ್ರವರ್ಗ-2A,2B,3A ಮತ್ತು 3B ಯ ಗರಿಷ್ಠ 38 ವರ್ಷ ಮತ್ತು ಎಸ್ ಸಿ/ಎಸ್ ಟಿ ಪ್ರವರ್ಗ-1ರ ಗರಿಷ್ಠ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾವುದು.

ಆಯ್ಕೆಯ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಲಾಗುವುದು ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅವರು ಪಡೆದಿರುವ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳು ಮತ್ತು ಅರ್ಹತಾ ಪರೀಕ್ಷೆಯ ಗರಿಷ್ಠ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಐದು ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ನಿಗದಿತ ಅರ್ಜಿ ಶುಲ್ಕ ಹಾಗೂ ಪಾವತಿಸುವ ವಿಧಾನ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ200/-ರೂ
ಪ್ರವರ್ಗ-2ಎ,2ಬಿ,3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳಿಗೆ100/-ರೂ
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಪ್ರವರ್ಗ-1 ಹಾಗೂ ಅಂಗವಿಕಲ ಆಭ್ಯರ್ಥಿಗಳಿಗೆಶುಲ್ಕ ವಿನಾಯಿತಿ ಇರುತ್ತದೆ

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/ramanagara-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card ಸೌಲಭ್ಯದ ಮೂಲಕ ಅಥವಾ ಚಲನ್ ಮೂಲಕ ಭಾರತೀಯ ಸ್ಟೇಟ್ ಬ್ಯಾಂಕ್‌ನ ಯಾವುದೇ ಶಾಖೆಗಳಲ್ಲಿ ಪಾವತಿಸಬಹುದು. ಚಲನ್ ಪ್ರತಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಿಂದ ಪ್ರಿಂಟ್ ಮಾಡಿಕೊಳ್ಳತಕ್ಕದ್ದು.ಪ್ರಿಂಟೌಟ್‌ ಅನ್ನು ಪಡೆದುಕೊಂಡು ಎಸ್‌.ಬಿ.ಐನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್ /ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://karnatakajudiciary.kar.nic.in/districtrecruitment.asp ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 30,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ

ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District court of Ramanagara has invited application for the post of stenographers
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X