ರಾಮನಗರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ವರ್ಗೀಕರಣ ಮತ್ತು ಮೀಸಲಾತಿ ಅನ್ವಯ ಕರ್ನಾಟಕ ನಾಗರೀಕ ಸೇವೆಗಳ ನಿಯಮದಂತೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು 86 ಗ್ರಾಮಲೆಕ್ಕಿಗರ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ಗ್ರಾಮಲೆಕ್ಕಿಗ- 86 ಹುದ್ದೆಗಳು
ವೇತನ ಶ್ರೇಣಿ-11600-21000/-
ವಿದ್ಯಾರ್ಹತೆ
ದ್ವಿತೀಯ ಪಿಯುಸಿ ಪರೀಕ್ಷೆ ಅಥವಾ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜಕೇಷನ್ ಅಥವಾ ಐಸಿಎಸ್ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಆಂಗ್ಲ ಭಾಷೆಯ ಗಣಕಯಂತ್ರ ನಿರ್ವಹಣೆ ಬಗ್ಗೆ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.
ಇದನ್ನು ಗಮನಿಸಿ: ಯುನೈಟೆಡ್ ಇಂಡಿಯಾದಲ್ಲಿ 696 ಹುದ್ದೆಗಳ ನೇಮಕಾತಿ
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಜಿ ಶುಲ್ಕ
- ಬ್ಯಾಂಕ್ ಶುಲ್ಕ ರೂ.30/- ಹೊರತು ಪಡಿಸಿ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-
- ಎಸ್ಸಿ/ಎಸ್.ಟಿ/ಪ್ರ-೧ ರ ಅಭ್ಯರ್ಥಿಗಳಿಗೆ ರೂ.250/-
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-08-2017
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-08-2017
ವಯೋಮಿತಿ
- ಕನಿಷ್ಠ 18 ವರ್ಷ ಮತ್ತು 35 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ಇರಲಿದೆ.
ಆಯ್ಕೆ ವಿಧಾನ
ಪಿಯುಸಿ ಯಲ್ಲಿ ಗಳಿಸಿರುವ ಅಂಕಗಳನ್ನು ಆಧರಿಸಿ ಮೆರಿಟ್ ಮೂಲಕ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಿಕೊಳ್ಳಲಾಗುವುದು.
ಹೆಚ್ಚಿನ ವಿವರಗಳಿಗಾಗಿ www.ramanagara.nic.in ಗಮನಿಸಿ