ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ http://www.rcub.ac.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 10,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಸಾಫ್ಟ್‌ವೇರ್ ಡೆವಲಪರ್ |
| Organisation | ರಾಣಿ ಚನ್ನಮ್ಮ ವಿಶ್ವವಿದ್ಯಾಲಯ |
| Educational Qualification | ಇಂಜಿನಿಯರಿಂಗ್ ಪದವಿ/ ಸ್ನಾತಕೋತ್ತರ ಪದವಿ |
| Job Location | ಬೆಳಗಾವಿ (ಕರ್ನಾಟಕ) |
| Salary Scale | ನೇಮಕಾತಿ ನಿಯಮಾನುಸಾರ ವೇತನ |
| Application Start Date | December 2, 2019 |
| Application End Date | December 10, 2019 |
ವಿದ್ಯಾರ್ಹತೆ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೇಮಕಾತಿಯ ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನದ ವಿವರ:
ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ಡಿಸೆಂಬರ್ 10,2019ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 13,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











