ಆರ್ ಬಿ ಐ ನೇಮಕಾತಿ 2019 : 24 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 24 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಇಂಜಿನಿಯರಿಂಗ್ ಪದವೀದರರು (ಸಿವಿಲ್ & ಇಲೆಕ್ಟ್ರಿಕಲ್) ಅರ್ಜಿಗಳನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 27, 2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಜ್ಯೂನಿಯರ್ ಇಂಜಿನಿಯರ್
Organisation ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಜ್ಯೂನಿಯರ್ ಇಂಜಿನಿಯರಿಂಗ್ (ಸಿವಿಲ್ ಅಥವಾ ಇಲೆಕ್ಟ್ರಿಕಲ್) ಪದವಿ ಅಥವಾ ಡಿಪ್ಲೊಮ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 21,400/-ರೂ
Application Start Date January 7, 2019
Application End Date January 27, 2019

ವಿದ್ಯಾರ್ಹತೆ:

ಜ್ಯೂನಿಯರ್ ಇಂಜಿನಿಯರ್ (ಸಿವಿಲ್) : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ 3 ವರ್ಷದ ಡಿಪ್ಲೊಮ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಿಂದ ಶೇ 65%ರಷ್ಟು (SC/ST/PWD ಅಭ್ಯರ್ಥಿಗಳು ಶೇ50% ರಷ್ಟು)ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಥವಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಶೇ55%ರಷ್ಟು (SC/ST/PWD ಅಭ್ಯರ್ಥಿಗಳು ಶೇ45%ರಷ್ಟು) ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಜ್ಯೂನಿಯರ್ ಇಂಜಿನಿಯರ್(ಇಲೆಕ್ಟ್ರಿಕಲ್): ಇಲೆಕ್ಟ್ರಿಕಲ್ ಅಥವಾ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ ಇಂಜಿನಿಯರಿಂಗ್ ನಲ್ಲಿ 3 ವರ್ಷದ ಡಿಪ್ಲೊಮ ಅನ್ನು ಶೇ 65% ರಷ್ಟು(SC/ST/PWD ಅಭ್ಯರ್ಥಿಗಳು ಶೇ55% ರಷ್ಟು) ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಉತ್ತೀರ್ಣರಾಗಿರಬೇಕು.ಅಥವಾ ಇಲೆಕ್ಟ್ರಿಕಲ್ ಅಥವಾ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಶೇ 55%ರಷ್ಟು (SC/ST/PWD ಅಭ್ಯರ್ಥಿಗಳು ಶೇ45%ರಷ್ಟು) ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳುಹುದ್ದೆಗಳ ಸಂಖ್ಯೆ
ಜ್ಯೂನಿಯರ್ ಇಂಜಿನಿಯರ್ (ಸಿವಿಲ್)15
ಜ್ಯೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್)
09

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಜನವರಿ 1,2019 ಕ್ಕೆ 20ವರ್ಷ ವಯಸ್ಸು ತುಂಬಿರಬೇಕು. 20 ರಿಂದ 30 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ SC/ST ಅಭ್ಯರ್ಥಿಗಳ ವಯೋಮಿತಿ 5 ವರ್ಷಗಳ ಅಂದರೆ 35 ವರ್ಷ ವಯಸ್ಸಿನವರೆಗೆ ಸಡಿಲಿಕೆಯನ್ನು ನೀಡಲಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಅಂದರೆ 33 ವರ್ಷ ವಯಸ್ಸಿನವರೆಗೆ ಸಡಿಲಿಕೆಯನ್ನು ನೀಡಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು(ಸಾಮಾನ್ಯ), 13 ವರ್ಷಗಳು(ಓಬಿಸಿ) ಮತ್ತು 15 ವರ್ಷಗಳು (SC/ST ) ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅವರು ಸಶಸ್ತ್ರ ದಳಗಳಲ್ಲಿ ಎಷ್ಟು ಸೇವೆ ಸಲ್ಲಿಸಿರುವರೋ ಅಷ್ಟು ವರ್ಷಗಳಿಗೆ 3 ವರ್ಷಗಳನ್ನು ಸೇರಿಸಿದರೆ ಎಷ್ಟು ವ‍ರ್ಷಗಳಾಗುವುದೋ ಅಷ್ಟು ವರ್ಷಗಳ ಸಡಿಲಿಕೆ ಮತ್ತು ವಿಧವೆಯರಿಗೆ 10 ವರ್ಷಗಳ ಸಡಿಲಿಕೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಜನವರಿ 1,1980 ರಿಂದ ಡಿಸೆಂಬರ್ 31,1989 ರವರೆಗಿನ ನಿವಾಸಿಗಳಾಗಿದ್ದಲ್ಲಿ 5ವರ್ಷಗಳ ಸಡಿಲಿಕೆಯನ್ನು ನೀಡಲಾಗುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಪರೀಕ್ಷೆ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಭಾಷಾ ಪ್ರಾವೀಣ್ಯತೆ ಪರೀಕ್ಷೆಯನ್ನು ನೀಡಲಾಗುತ್ತದೆ. ಅದರಲ್ಲಿ ಅವರ ಪರ್ಫಾರ್ಮೆನ್ಸ್ ಆಧರಿಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ :

ಈ ಹುದ್ದೆಗಳಿಗೆ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು ರೂ.450/- ಮತ್ತು SC/ST/PWD/EXS ಅಭ್ಯರ್ಥಿಗಳು 50/-ರೂ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಈ ಹುದ್ದೆಗಳ ಬಗೆಗೆ ಅಧಿಕೃತ ಮಾಹಿತಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
RBI recruitment 2019 notification has been released on official website for the recruitment of 24 Junior Engineer Posts. Interested Candidates can apply for this jobs.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X