ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 17 ಗ್ರೇಡ್ ಎ ಮತ್ತು ಗ್ರೇಡ್ ಬಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಗ್ರೇಡ್ ಎ ಮತ್ತು ಬಿ ಅಧಿಕಾರಿ |
| Organisation | ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ |
| Educational Qualification | ಕಾನೂನು ಪದವಿ, ಸ್ನಾತಕೋತ್ತರ ಪದವಿ, ಪದವಿ,ಡಿಪ್ಲೋಮಾ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 28,150/- ರಿಂದ 35,150/-ರೂ |
| Application Start Date | December 30, 2019 |
| Application End Date | January 20, 2020 |
ವಿದ್ಯಾರ್ಹತೆ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಗ್ರೇಡ್ ಎ ಮತ್ತು ಬಿ ಅಧಿಕಾರಿ ಹುದ್ದೆಗಳಿಗೆ ಕಾನೂನು ಪದವಿ, ಸ್ನಾತಕೋತ್ತರ ಪದವಿ, ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಡಿಸೆಂಬರ್ 1,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಭಾರತ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಗ್ರೇಡ್ ಎ ಮತ್ತು ಬಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,150/- ರಿಂದ 35,150/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಆಫ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ


Click it and Unblock the Notifications











