RBI Recruitment 2019: 926 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ..ಜ.20ರೊಳಗೆ ಅರ್ಜಿ ಹಾಕಿ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 926 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಪ್ರಕಟಣೆ ಹೊರಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಆಸಕ್ತ ಮತ್ತು ಯಾವುದೇ ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅಭ್ಯರ್ಥಿಗಳಿಗೆ ಈ ಮುಂಚೆ ಜನವರಿ 16ರೊಳಗೆ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಜನವರಿ 20,2020ರ ವರೆಗೆ ವಿಸ್ತರಿಸಲಾಗಿದೆ.

ಆರ್‌ಬಿಐ ನಲ್ಲಿ ಬಂಪರ್ ಉದ್ಯೋಗಾವಕಾಶ… 926 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಆರ್‌ಬಿಐ ಸಹಾಯಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹೆತ ಏನಿರಬೇಕು ?:

ಶೈಕ್ಷಣಿಕ ವಿದ್ಯಾರ್ಹೆತ ಏನಿರಬೇಕು ?:

ಯಾವುದೇ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಉತ್ತೀರ್ಣರಾದ( ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ಅಂಗವಿಕಲ) ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ವಯೋಮಿತಿ:

ಡಿಸೆಂಬರ್ 1,2019ರ ಅನ್ವಯ 20 ರಿಂದ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. 

ನೀಡಲಾಗುವ ವೇತನವೆಷ್ಟು ?:

ನೀಡಲಾಗುವ ವೇತನವೆಷ್ಟು ?:

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಒಟ್ಟಾರೆ 36,091/ ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ?:

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ?:

ಅಭ್ಯರ್ಥಿಗಳನ್ನು ಎರಡು ಹಂತದ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ಮೊದಲನೆಯದಾಗಿ ಅಭ್ಯರ್ಥಿಗಳು ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಎರಡನೇ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿರುತ್ತಾರೆ. ಈ ರೀತಿಯಾಗಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23.12.2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.01.2020

ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20.1.2020

ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ (ತಾತ್ಕಾಲಿಕ) : ಫೆಬ್ರವರಿ 14 ಮತ್ತು 15,2020

ಆನ್‌ಲೈನ್ ಮುಖ್ಯ ಪರೀಕ್ಷೆಯ ದಿನಾಂಕ: ಮಾರ್ಚ್ 2020

ಅರ್ಜಿ ಶುಲ್ಕ ಎಷ್ಟು ?:

ಅರ್ಜಿ ಶುಲ್ಕ ಎಷ್ಟು ?:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 450/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜನವರಿ 20,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ ?:

ಅರ್ಜಿ ಸಲ್ಲಿಸುವುದು ಹೇಗೆ ?:

ಈ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ https://www.rbi.org.in ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 20,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
RBI recruitment 2019 notification has been released on official website for the recruitment of 926 assistant posts. Interested candidates can apply through online before 20th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+