ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.

ವಿದ್ಯಾರ್ಹತೆ:
10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಜನವರಿ 1,2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,940/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











