RBI Recruitment 2021: 841 ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 841 ಆಫೀಸ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 15,2021ರೊಳಗೆ ಅರ್ಜಿಯನ್ನು ಹಾಕಬಹುದು.

ಆರ್‌ಬಿಐ ನಲ್ಲಿ 841 ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

10ನೇ ತರಗತಿ (ಎಸ್‌ಎಸ್‌ಸಿ/ಮೆಟ್ರಿಕ್ಯುಲೇಶನ್) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ/ಓಬಿಸಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,940/- ರಿಂದ 23,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಓಬಿಸಿ/ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 450/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಆರ್‌ಬಿಐ ಅಧಿಕೃತ ವೆಬ್‌ಸೈಟ್
https://www.rbi.org.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RBI recruitment 2021 notification has been released for 841 office attendent posts. Interested candidates can apply through online before March 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+