RBI Recruitment 2022 : 303 ಅಧಿಕಾರಿ ಗ್ರೇಡ್ ಬಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 303 ಅಧಿಕಾರಿ ಗ್ರೇಡ್ ಬಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 28,2022 ರಿಂದ ಏಪ್ರಿಲ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 303 ಹುದ್ದೆಗಳ ನೇಮಕಾತಿ

RBI ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಅಧಿಕಾರಿ ಗ್ರೇಡ್ ಬಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಶೇ.೫೫ರಷ್ಟು ಅಂಕಗಳೊಂದಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಯಾವ ಪ್ರಾದೇಶಿಕ ಕೇಂದ್ರದಲ್ಲಿ ನೇಮಕಾತಿ ಬಯಸುತ್ತಾರೋ, ಅಲ್ಲಿನ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು, ಅರ್ಥಮಾಡಿಕೊಳ್ಳಲು ಮತ್ತು ಮಾತನಾಡಲು ತಿಳಿದಿರಬೇಕು.

RBI ನೇಮಕಾತಿ 2022 ವಯೋಮಿತಿ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಅಧಿಕಾರಿ ಗ್ರೇಡ್ ಬಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

RBI ನೇಮಕಾತಿ 2022 ವೇತನದ ವಿವರ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಅಧಿಕಾರಿ ಗ್ರೇಡ್ ಬಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನ ಜೊತೆಗೆ ಇತರೆ ಭತ್ಯೆಯನ್ನು ನೀಡಲಾಗುವುದು.

RBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಅಧಿಕಾರಿ ಗ್ರೇಡ್ ಬಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಪ್ರಿಲಿಮಿನರಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

RBI ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಅಧಿಕಾರಿ ಗ್ರೇಡ್ ಬಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 850/-ರೂ ಮತ್ತು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

RBI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಅಧಿಕಾರಿ ಗ್ರೇಡ್ ಬಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 28,2022 ರಿಂದ ಏಪ್ರಿಲ್ 18,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳಿಗೆ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Reserve bank of india recruitment 2022 notification has been released for 303 officers grade B and assistant manager Posts. Interested candidates can apply before April 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X