ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್(ಆರ್‌ಸಿಎಫ್) ನೇಮಕಾತಿ 50 ಆಪರೇಟರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆರ್‌ಸಿಎಫ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 10,2019ರೊಳಗೆ ಸಲ್ಲಿಸಬಹುದು.
CRITERIA | DETAILS |
Name Of The Posts | ಆಪರೇಟರ್ ಟ್ರೈನಿ |
Organisation | ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್(ಆರ್‌ಸಿಎಫ್) |
Educational Qualification | ಬಿಎಸ್ಸಿ ಅಥವಾ ಡಿಪ್ಲೋಮಾ |
Job Location | ಭಾರತದೆಲ್ಲೆಡೆ |
Salary Scale | ತಿಂಗಳಿಗೆ 22,000/- ರಿಂದ 60,000/-ರೂ |
Application Start Date | March 25, 2019 |
Application End Date | April 10, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಬಿಎಸ್ಸಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಫೆಬ್ರವರಿ 1,2019 ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಒಂದು ವರ್ಷದ ತರಬೇತಿ ಹಂತದಲ್ಲಿ ತಿಂಗಳಿಗೆ 9,000/-ರೂ ಸ್ಟೈಫಂಡ್ ನೀಡಲಾಗುವುದು. ತರಬೇತಿ ಮುಗಿದ ನಂತರ ತಿಂಗಳಿಗೆ 22,000/- ರಿಂದ 60,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ / ಆನ್‌ಲೈನ್ ಪರೀಕ್ಷೆ, ಮೆಡಿಕಲ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅರ್ಹ ಅಭ್ಯರ್ಥಿಗಳು ಆರ್‌ಸಿಎಫ್‌ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 10,2019 ರೊಳಗೆ ಸಲ್ಲಿಸಬಹುದು.
ಅಭ್ಯರ್ಥಿಗಳು ಆರ್‌ಸಿಎಫ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ