ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ (ಆರ್‌ಸಿಎಫ್) 104 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 7ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ :
ಪದವಿ, ಬಿ.ಎಸ್ಸಿ, ಹೆಚ್.ಎಸ್ಸಿ, ಬಿ.ಕಾಂ, ಬಿಬಿಎ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಆರ್‌ಸಿಎಫ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನವೆಂಬರ್ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಸ್ಟೈಫೆಂಡ್ :
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,000/- ರಿಂದ 9,000/-ರೂಗಳ ವರೆಗೆ ಸ್ಟೈಫೆಂಡ್ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ :
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rcfltd.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











