ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ 396 ಗ್ರಾಜುಯೇಟ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜುಲೈ 30,2022 ರಿಂದ ಆಗಸ್ಟ್ 14,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.
RCFL ನೇಮಕಾತಿ 2022 ವಿದ್ಯಾರ್ಹತೆ :
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಕಾಂ, ಬಿಬಿಎ, ಪದವಿ, ಡಿಪ್ಲೋಮಾ, ಬಿಎಸ್ಸಿ, 8ನೇ ತರಗತಿ, 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
RCFL ನೇಮಕಾತಿ 2022 ವಯೋಮಿತಿ :
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಏಪ್ರಿಲ್ 1,2022ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
RCFL ನೇಮಕಾತಿ 2022 ವೇತನ :
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,000/- ರಿಂದ 9,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
RCFL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
RCFL ನೇಮಕಾತಿ 2022 ಅರ್ಜಿ ಶುಲ್ಕ :
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
RCFL ನೇಮಕಾತಿ 2022 ಅರ್ಜಿ ಸಲ್ಲಿಕೆ :
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.rcfltd.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 30,2022 ರಿಂದ ಆಗಸ್ಟ್ 14,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ಜವಾನ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.