ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು 12 ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ http://www.rcub.ac.in/ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಜನವರಿ 25,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ |
Organisation | ರಾಣಿ ಚನ್ನಮ್ಮ ವಿಶ್ವವಿದ್ಯಾಲಯ |
Educational Qualification | ಸ್ನಾತಕೋತ್ತರ ಪದವಿ, ಪಿ.ಹೆಚ್‌ಡಿ/ಎಂ.ಫಿಲ್ |
Job Location | ಬೆಳಗಾವಿ (ಕರ್ನಾಟಕ) |
Salary Scale | ಸಂಶೋಧನಾ ಸಹಾಯಕ-ತಿಂಗಳಿಗೆ 22,000/-ರೂ ಮತ್ತು ಕ್ಷೇತ್ರ ತನಿಖಾಧಿಕಾರಿ-ತಿಂಗಳಿಗೆ 15,000/-ರೂ |
Application Start Date | January 18, 2020 |
Application End Date | January 25, 2020 |
ಹುದ್ದೆಗಳ ವಿವರ:
ಸಂಶೋಧನಾ ಸಹಾಯಕ: 4 ಹುದ್ದೆಗಳು
ಕ್ಷೇತ್ರ ತನಿಖಾಧಿಕಾರಿ: 8 ಹುದ್ದೆಗಳು
ಒಟ್ಟು 12 ಹುದ್ದೆಗಳು
ವಿದ್ಯಾರ್ಹತೆ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೇಮಕಾತಿಯ ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಪಿ.ಹೆಚ್‌ಡಿ/ಎಂ.ಫಿಲ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನದ ವಿವರ:
ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ashokdsouza2005@gmail.com ವಿಳಾಸಕ್ಕೆ ಜನವರಿ 25,2020ರೊಳಗೆ ಮೇಲ್ ಮಾಡುವ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿಯ ವಿಳಾಸ:
Dr.Ashok Antony D'souza,
Professor, P.G Dept. of studies in social work,
Rani Channamma University,
Belagavi-591 156
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.