ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೇಮಕಾತಿ: 12 ಹುದ್ದೆಗಳು..ಜ.25ರೊಳಗೆ ಅರ್ಜಿ ಹಾಕಿ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು 12 ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ http://www.rcub.ac.in/ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಜನವರಿ 25,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ 12 ಹುದ್ದೆಗಳಿವೆ

 

CRITERIA DETAILS
Name Of The Posts ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ
Organisation ರಾಣಿ ಚನ್ನಮ್ಮ ವಿಶ್ವವಿದ್ಯಾಲಯ
Educational Qualification ಸ್ನಾತಕೋತ್ತರ ಪದವಿ, ಪಿ.ಹೆಚ್‌ಡಿ/ಎಂ.ಫಿಲ್
Job Location ಬೆಳಗಾವಿ (ಕರ್ನಾಟಕ)
Salary Scale ಸಂಶೋಧನಾ ಸಹಾಯಕ-ತಿಂಗಳಿಗೆ 22,000/-ರೂ ಮತ್ತು ಕ್ಷೇತ್ರ ತನಿಖಾಧಿಕಾರಿ-ತಿಂಗಳಿಗೆ 15,000/-ರೂ
Application Start Date January 18, 2020
Application End Date January 25, 2020

ಹುದ್ದೆಗಳ ವಿವರ:

ಸಂಶೋಧನಾ ಸಹಾಯಕ: 4 ಹುದ್ದೆಗಳು

ಕ್ಷೇತ್ರ ತನಿಖಾಧಿಕಾರಿ: 8 ಹುದ್ದೆಗಳು

ಒಟ್ಟು 12 ಹುದ್ದೆಗಳು

ವಿದ್ಯಾರ್ಹತೆ:

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೇಮಕಾತಿಯ ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಪಿ.ಹೆಚ್‌ಡಿ/ಎಂ.ಫಿಲ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

 

ಅರ್ಜಿ ಪ್ರಕ್ರಿಯೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ashokdsouza2005@gmail.com ವಿಳಾಸಕ್ಕೆ ಜನವರಿ 25,2020ರೊಳಗೆ ಮೇಲ್ ಮಾಡುವ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:

Dr.Ashok Antony D'souza,

Professor, P.G Dept. of studies in social work,

Rani Channamma University,

Belagavi-591 156

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
RCUB recruitment 2020 notification has been released on official website for the recruitment of 12 assistant and investigator posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X