RCUB Recruitment 2020: 58 ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣ ಬೆಳಗಾವಿ, ಹಾಗೂ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರಗಳಾದ ವಿಜಯಪುರ, ಬಾಗಲಕೋಟೆ, ಜಮಖಂಡಿ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕೋತ್ತರ ವಿಭಾಗಗಳಿಗೆ 2020-21ನೇ ಶೈಕ್ಷಣಿಕ ಸಾಲಿನ ಹೆಚ್ಚುವರಿ ಸ್ನಾತಕೋತ್ತರ (ಪಿಜಿ) ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳ ನಿಯಮಾನುಸಾರ 58 ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ 58 ಅತಿಥಿ ಉಪನ್ಯಾಸಕರ ನೇಮಕಾತಿ

ಖಾಲಿ ಹುದ್ದೆಗಳ ವಿವರ:

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ 58 ಅತಿಥಿ ಉಪನ್ಯಾಸಕರ ನೇಮಕಾತಿ

ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ಸ್ನಾತಕೋತ್ತರ ಪದವಿ. ನೆಟ್, ಸ್ಲೆಟ್, ಎಂ.ಫಿಲ್ ಮತ್ತು ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನದ ವಿವರ:

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಭಾವನೆಯನ್ನು ವಿಶ್ವವಿದ್ಯಾಲಯದ ನಿಯಮಾನುಸಾರ ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ವೆಬ್‌ಸೈಟ್ http://www.rcub.ac.in/ ನಲ್ಲಿ ಲಭ್ಯವಿರುವ ಗೂಗಲ್ ಶೀಟ್ ಲಿಂಕ್ ಅನ್ನು ಬಳಸಿ ವಿವರಗಳನ್ನು ಸೆಪ್ಟೆಂಬರ್ 18,2020ರೊಳಗೆ ಭರ್ತಿ ಮಾಡಬೇಕು ಹಾಗೂ ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಂಡು ದ್ವಿ-ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗುವುದು.

ಅಭ್ಯತರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Rani Channamma University, Belagavi 2020 notification has been released for 58 guest faculty posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X