
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಸನ ವಿಭಾಗ ಹಾಸನ ವ್ಯಾಪ್ತಿಯ ಜಿಲ್ಲಾ ಪ್ರಯೋಗಾಲಯಕ್ಕೆ ನೀರಿನ ಮಾದರಿಗಳ ಸಂಗ್ರಹಣಾಕೋಶದ ಉಸ್ತುವಾರಿ ಸಿಬ್ಬಂದಿಯನ್ನು ಭರ್ತಿಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
ಶೇಕಡ 60 ರಷ್ಟು ಅಂಕಗಳೊಂದಿಗೆ ವಿಜ್ಞಾನದ ವಿಷಯದಲ್ಲಿ ಬಿ.ಎಸ್ಸಿ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅನುಭವ:
ನೀರಿನ ಗುಣಮಟ್ಟ ವಿಶ್ಲೇಣೆಯ ಪ್ರಯೋಗಾಲಯದಲ್ಲಿ ಒಂದು ಅಥವಾ ಎರಡು ವರ್ಷ ಅನುಭವದೊಂದಿಗೆ ಕಂಪ್ಯೂಟರ್ ನಿರ್ವಹಣೆ ಹೊಂದಿರಬೇಕು.
ವೇತನ:
ಮಾದರಿಗಳ ಸಂಗ್ರಹಣಾಕೋಶದ ಉಸ್ತುವಾರಿ ಸಿಬ್ಬಂದಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಎಲ್ಲಾ ಅಂಕಪಟ್ಟಿ, ಅನುಭವ ಪತ್ರಗಳ ನಕಲುಗಳೊಂದಿಗೆ ಜೂನ್ 14,2021ರ ಸಂಜೆ 5:30ರೊಳಗೆ ಕಾರ್ಯಪಾಲಕ ಇಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಸನ ವಿಭಾಗ ಜಿಲ್ಲಾ ಪ್ರಯೋಗಾಲಯ ಜಿಲ್ಲಾ ಪಂಚಾಯತ್ ಕಟ್ಟಡ ಹಾಸನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











