ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು 25 ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ, ಎಂಬಿಎ, ಗ್ರಾಜುಯೇಟ್ ಇನ್ ಇಂಜಿನಿಯರಿಂಗ್, ಪೋಸ್ಟ್ ಗ್ರಾಜುಯೇಟ್, ಎಂಸಿಎ, ಎಂ.ಎಸ್ಸಿ, ಬಿ.ಇ, ಪದವಿ, ಎಂಎ ಮತ್ತು ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ಗರಿಷ್ಟ 45 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/- ರಿಂದ 1,00,000/-ರೂ ಗಳ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ ?:
ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 30,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Commissioner,
Department of Rural drinking water and sanitation,
2nd Floor,
K.H.B Building,
Kaveri Bhavan,
K.G Road,
Bengaluru-560009.


Click it and Unblock the Notifications











