ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಸಾಫ್ಟ್‌ವೇರ್ ಡೆವಲಪರ್ ಮತ್ತು ಮೊಬೈಲ್ ಅಪ್ಲಿಕೇಶನ್ ಡೆವಲಪರ್ ಹುದ್ದೆಗಳನ್ನು ಮತ್ತು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಐಇಸಿ ಚಟುವಟಿಕೆಗಳನ್ನು ಪರಿಣಾಕಾರಿಯಾಗಿ ಹಮ್ಮಿಕೊಳ್ಳುವ ಉದ್ದೇಶದಿಂದ ಪ್ರಾಜೆಕ್ಟ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮೂಲಕ ಸೆ.15,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಸಾಫ್ಟ್‌ವೇರ್ ಡೆವಲಪರ್, ಮೊಬೈಲ್ ಅಪ್ಲಿಕೇಶನ್ ಡೆವಲಪರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂ,ಇ/ಎಂ.ಟೆಕ್, ಎಂಸಿಎ, ಎಂಎಸ್ಸಿ ಮತ್ತು ಪ್ರಾಜೆಕ್ಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 4೦ ರಿಂದ ೪೫ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳಿಗೆ ತಿಂಗಳಿಗೆ 50,000/-ರೂ, ಮೊಬೈಲ್ ಅಪ್ಲಿಕೇಶನ್ ಡೆವಲಪರ್ ಹುದ್ದೆಗಳಿಗೆ ತಿಂಗಳಿಗೆ 40,000/-ರೂ ಮತ್ತು ಪ್ರಾಜೆಕ್ಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆ ಅನುಭವದ ಆಧಾರದ ಮೇಲೆ 1:10 ಅನುಪಾತದಲ್ಲಿ ಲಿಖಿತ ಪರೀಕ್ಷೆಗಾಗಿ ಕಿರುಪಟ್ಟಿ ಮಾಡಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಅರ್ಹರಾಗುವ ಅಭ್ಯರ್ಥಿಗಳನ್ನು ಆಯುಕ್ತರು, ಗ್ರಾಮೀಣಾಭಿವೃದ್ಧಿ ರವರ ನೇತೃತ್ವದ ಸಮಿತಿಯು ಸಂದರ್ಶನ ಮಾಡಿ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ ?:
ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಯುಕ್ತಾಲಯದ [email protected] ವಿಳಾಸಕ್ಕೆ ಸೆಪ್ಟೆಂಬರ್ 15,2020ರೊಳಗೆ ಮೇಲ್ ಮಾಡುವ ಮೂಲಕವೇ ಅರ್ಜಿ ಸಲ್ಲಿಸಬಹುದು. ಆಯುಕ್ತಾಲಯದಲ್ಲಿ ಯಾವುದೇ ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗುವುದಿಲ್ಲ.
ಅಭ್ಯರ್ಥಿಗಳು ಡೆವಲಪರ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











