RDPR Karnataka Recruitment 2021: 154 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 154 ಹುದ್ದೆಗಳ ನೇಮಕಾತಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 154 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್, ಪದವಿ, ಎಂಸಿಎ, ಎಂ.ಟೆಕ್, ಬಿ.ಇ, ಎಂ.ಎಸ್ಸಿ, ಎಂಎಸ್‌ಡಬ್ಲ್ಯೂ ಮತ್ತು ಎಂ.ಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 1,50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 28,2021ರ ಸಂಜೆ 5:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The Commissioner,
Rural drinking water and sanitation department,
2nd floor, KHB complex,
Cauvery bhavan,
K.G.. Road,
Bengaluru-560 009.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
RDPR karnataka recruitment 2021 notification has been released for 154 microbiologist, consultant and various posts. Interested candidates can apply before April 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X