RDPR Recruitment 2021: 189 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಗಳಲ್ಲಿ ಖಾಲಿ ಇರುವ 189 ತಾಂತ್ರಿಕ ಸಹಾಯಕರು (ಕೃಷಿ/ಅರಣ್ಯ/ತೋಟಗಾರಿಕೆ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ..ಮಾ.25ರೊಳಗೆ ಅರ್ಜಿ ಹಾಕಿ

 

ವಿದ್ಯಾರ್ಹತೆ:

ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಬಿ.ಎಸ್ಸಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಸಲಾಗುವುದು ಮತ್ತು ನಿಗದಿತ ಮಾನದಂಡಗಳಂತೆ ತಾತ್ಕಾಲಿಕ ಮೆರಿಟ್ ಪಟ್ಟಿ ತಯಾರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
RDPR karnataka recruitment 2021 notification has been released for 189 technical assistant posts. Interested candidates can apply before March 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X