ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ರಾಜ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ 23 ಜಿಲ್ಲಾ ಯೋಜನಾ ವ್ಯವಸ್ಥಾಪಕ, ಜಿಲ್ಲಾ ಎಂಐಎಸ್ ಸಮಾಲೋಚಕರು, ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು, ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು ಮತ್ತು ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಲೋಚಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಸೆಪ್ಟೆಂಬರ್ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:
ಜಿಲ್ಲಾ ಯೋಜನಾ ವ್ಯವಸ್ಥಾಪಕ - 4 ಹುದ್ದೆಗಳು
ಜಿಲ್ಲಾ ಎಂಐಎಸ್ ಸಮಾಲೋಚಕರು - 2 ಹುದ್ದೆಗಳು
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು - 2 ಹುದ್ದೆಗಳು
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು - 1 ಹುದ್ದೆ
ಮತ್ತು ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಲೋಚಕರು - 4 ಹುದ್ದೆಗಳು
ಒಟ್ಟು ೨೩ ಹುದ್ದೆಗಳು
ವಿದ್ಯಾರ್ಹತೆ:
ಪೋಸ್ಟ್ ಗ್ರಾಜುಯೇಟ್ ಪದವಿ, ಎಂಸಿಎ/ಎಂ.ಎಸ್ಸಿ/ ಬಿಇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
ವೇತನ:
ಜಿಲ್ಲಾ ಯೋಜನಾ ವ್ಯವಸ್ಥಾಪಕ - ತಿಂಗಳಿಗೆ 35,000 /-ರೂ ರಿಂದ 45,000/-ರೂ
ಜಿಲ್ಲಾ ಎಂಐಎಸ್ ಸಮಾಲೋಚಕರು - ತಿಂಗಳಿಗೆ 25,000/-ರೂ ರಿಂದ 30,000/-ರೂ
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು - ತಿಂಗಳಿಗೆ 25,000/-ರೂ ರಿಂದ 30,000/-ರೂ
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು - ತಿಂಗಳಿಗೆ 25,000/-ರೂ ರಿಂದ 30,000/-ರೂ
ಮತ್ತು ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಲೋಚಕರು - ತಿಂಗಳಿಗೆ 25,000/-ರೂ ರಿಂದ 30,000/-ರೂ
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿಇ ಅಧಿಕೃತ ವೆಬ್‌ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ತುಂಬಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೊತೆಗೆ ಒಂದು ಪುಟದಲ್ಲಿ ಟಿಇಇಪ್ಪಣಿ ಬರೆದು ಅರ್ಜಿಯನ್ನು ಕಚೇರಿಗೆ ಸೆಪ್ಟೆಂಬರ್ 27,2021ರ ಸಂಜೆ 5:30ರೊಳಗೆ ತಲುಪಿಸಬೇಕಿರುತ್ತದೆ. ನಂತರ ಬಂದಂತಹ ಯಾವುದೇ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











