RDPR Recruitment 2020: 10 ಸಮಾಲೋಚಕ ಹುದ್ದೆಗಳ ನೇಮಕಾತಿ...ಮೇ.11ರೊಳಗೆ ಅರ್ಜಿ ಹಾಕಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಗಳಲ್ಲಿ ಖಾಲಿಯಿರುವ 10 ಸಮಾಲೋಚಕರನ್ನು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 10 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://rdpr.kar.nic.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮೇ 11,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:

ಸಮಾಲೋಚಕ ಹುದ್ದೆಗಳಿಗೆ ಎಂಎಸ್ಡಬ್ಲ್ಯೂ/ಎಂಎ, ಎಂಎಸ್, ಬಿ.ಇ ಪದವಿ ಮತ್ತು ಎಂಸಿಎ/ಎಂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.

ವೇತನದ ವಿವರ:

ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಹ ಅಭ್ಯರ್ಥಿಗಳ ಕಿರುಪಟ್ಟಿ ಸಿದ್ಧಪಡಿಸಿ ಸಂದರ್ಶನದ ಕುರಿತು ದೂರವಾಣಿ ಮೂಲಕ ತಿಳಿಸಲಾಗುವುದು.
ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಆಯಾ ಜಿಲ್ಲಾ ಪಂಚಾಯಿತಿ ಕಛೇರಿಯಲ್ಲಿ / ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ ?:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು [email protected] ವಿಳಾಸಕ್ಕೆ ಪಿಡಿಎಫ್ ನಲ್ಲಿ ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿಯ ಹಾರ್ಡ್ ಪ್ರತಿಯನ್ನು ಮೇ.11,2020ರ ಸಂಜೆ 5:30 ಗಂಟೆಯೊಳಗೆ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದು. ನಂತರ ಬಂದಂತಹ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Rural development and panchayath raj (RDPR) recruitment 2020 notification has been released on official website for the recruitment of 10 consultant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+