ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿಯಿರುವ 25 ಸಮಾಲೋಚಕ ಮತ್ತು ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಜೆಜೆಎಂ ಸಮಾಲೋಚಕರು ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ, ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು ಹುದ್ದೆಗಳಿಗೆ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್/ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ, ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳಿಗೆ ಪೋಸ್ಟ್ ಗ್ರಾಜುಯೇಟ್ ಪದವಿ , ಜಿಲ್ಲಾ ಎಂಐಎಸ್ ಸಮಾಲೋಚಕರು ಹುದ್ದೆಗಳಿಗೆ ಎಂಸಿಎ/ಎಂ.ಎಸ್ಸಿ/ಬಿ.ಇ, ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು ಹುದ್ದೆಗಳಿಗೆ ಪತ್ರಿಕೋದ್ಯಮದಲ್ಲಿ ಪೋಸ್ಟ್ ಗ್ರಾಜುಯೇಟ್, ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು ಹುದ್ದೆಗಳಿಗೆ ಪದವಿ, ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು ಹುದ್ದೆಗಳಿಗೆ ಪದವಿ, ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಾಲೋಚಕರು ಹುದ್ದೆಗಳಿಗೆ ಎಂಸಿಎ/ಎಂಎಸ್ಸಿ/ಬಿಇ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಹುದ್ದೆಗಳಿಗೆ ಎಂ.ಎಸ್.ಡಬ್ಲ್ಯೂ/ಎಂಎ/ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಜೆಜೆಎಂ ಸಮಾಲೋಚಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/- ರಿಂದ 1,00,000/-ರೂ, ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು ಮತ್ತು ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 45,000/-ರೂ, ಜಿಲ್ಲಾ ಎಂಐಎಸ್ ಸಮಾಲೋಚಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/ -ರಿಂದ 25,000/-ರೂ, ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು, ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು, ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು, ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಾಲೋಚಕರು ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ವೇತನವನ್ನು ನೀಡಲಾಗುವುದು.
ವಯೋಮಿತಿ:
ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರು ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಎಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ, ಬೆಂಗಳೂರು -5600 009 ವಿಳಾಸಕ್ಕೆ ನವೆಂಬರ್ 30,2020ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ತದನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.