ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿಯಿರುವ 30 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ವಿವಿಧ ಹುದ್ದೆಗಳಿಗೆ ಎಂಎಸ್‌ಡಬ್ಲ್ಯೂ, ಎಂ.ಎ, ಸ್ನಾತಕೋತ್ತರ ಪದವಿ, ಪದವಿ, ಬಿ.ಇ, ಎಂಸಿಎ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 22,000/- ರಿಂದ 60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ವಯೋಮಿತಿ:
ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 11,2021ರ ಸಂಜೆ 5:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ತದನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಕಚೇರಿ ವಿಳಾಸ:
The Commissioner,
Rural drinking water and sanitation department,
2nd floor,
KHB complex,
cauvery bhavan,
K.G. Road,
Bengaluru-560009.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ