RDPR Recruitment 2020: 407 ಹುದ್ದೆಗಳ ನೇಮಕಾತಿ...ಮೇ.15ರೊಳಗೆ ಅರ್ಜಿ ಹಾಕಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ 407 ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 407 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಕನಿಷ್ಟ ಬಿ.ಎಸ್ಸಿ ಅಥವಾ ಎಂ.ಎಸ್ಸಿ ಅಥವಾ ಸಮನಾಂತರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 4೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಹ ಅಭ್ಯರ್ಥಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆ ಅನುಗುಣವಾಗಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ ?:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ವೆಬ್ಸೈಟ್ http://www.end2endmgnrega.co.in/Forms/login/frmlogin.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Rural development and panchayath raj (RDPR) recruitment 2020 notification has been released on official website for the recruitment of 407 technical assistant posts. Interested candidates can apply through online before 15th May 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+