ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 7 ಪ್ರಾಜೆಕ್ಟ್ ಅಧಿಕಾರಿ ಮತ್ತು ಜಿಲ್ಲಾ ಕೋ-ಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಪ್ರಾಜೆಕ್ಟ್ ಅಧಿಕಾರಿ, ಜಿಲ್ಲಾ ಕೋ-ಆರ್ಡಿನೇಟರ್ |
| Organisation | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
| Educational Qualification | ಬಿ.ಟೆಕ್, ಎಂ.ಟೆಕ್/ಎಂ.ಇ/ಎಂ.ಎಸ್ಸಿ, ಸ್ನಾತಕೋತ್ತರ ಪದವಿ, |
| Job Location | ಕರ್ನಾಟಕ |
| Salary Scale | ಪ್ರಾಜೆಕ್ಟ್ ಅಧಿಕಾರಿ- ತಿಂಗಳಿಗೆ 50,000/-ರೂ, ಜಿಲ್ಲಾ ಕೋಆರ್ಡಿನೇಟರ್ -ತಿಂಗಳಿಗೆ 35,000/-ರೂ |
| Application Start Date | March 4, 2020 |
| Application End Date | March 20, 2020 |
ವಿದ್ಯಾರ್ಹತೆ:
ಬಿ.ಟೆಕ್, ಎಂ.ಟೆಕ್/ಎಂ.ಇ/ಎಂ.ಎಸ್ಸಿ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ಮತ್ತು
ಜಿಲ್ಲಾ ಕೋಆರ್ಡಿನೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅನುಭವವನ್ನು ಆಧರಿಸಿ ಮೆರಿಟ್ ಆಧಾರದಲ್ಲಿ 1:0 ಅನುಪಾತದಲ್ಲಿ ಲಿಖಿತ ಪರೀಕ್ಷೆಗಾಗಿ ಶಾರ್ಟ್‌ಲೀಸ್ಟ್ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ ?:
ಅರ್ಹ ಅಭ್ಯರ್ಥಿಗಳು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ವೆಬ್‌ಸೈಟ್ http://www.end2endmgnrega.co.in/Forms/login/frmlogin.aspx ನಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ತದನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











