ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ 7 ಸಮಾಲೋಚಕ ಮತ್ತು ಜಿಯೋಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 19ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ:
ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ, ಪೋಸ್ಟ್ ಗ್ರಾಜುಯೇಶನ್, ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಕಿರಿಯ ಸಮಾಲೋಚಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ, ಪ್ರೊಕ್ಯೂರ್ಮೆಂಟ್ ಸಮಾಲೋಚಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 85,000/-ರೂ, ಸಾಲಿಡ್ ಮತ್ತು ಲಿಕ್ವಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಸಮಾಲೋಚಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/-ರೂ, ಜಿಯೋಲಜಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ, ಇನ್ಫಾರ್ಮೇಶನ್ ಎಜುಕೇಶನ್ ಮತ್ತು ಕಮ್ಯುನಿಕೇಶನ್ ಸಮಾಲೋಚಕ ಮತ್ತು ಜಿಲ್ಲಾ ಎಂಐಎಸ್/ಎಂ ಮತ್ತು ಇ ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 22,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 19,2021ರ ಸಂಜೆ 5:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
The Commissioner,
Rural drinking water and sanitation department,
2nd floor,
KHB complex,
Cauvery bhavan,
K.G road,
Bengaluru-560 009.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.