ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 26,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಬಿ.ಇ/ಬಿ.ಟೆಕ್/ಎಂಸಿಎ/ಎಂಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ ೪೫ ವರ್ಷ ವಯೋಮಿತಿಯೊಳಗಿರಬೇಕು.
ವೇತನ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಜಿ ಸಲ್ಲಿಕೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rdpr.karnataka.gov.in/english ಗೆ ಭೇಟಿ ನೀಡಿ. ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ, ನಂತರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 26,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಹಾಕಬಹುದು.
ಕಚೇರಿ ವಿಳಾಸ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,
3ನೇ ಮಹಡಿ,
3ನೇ ಗೇಟ್, ಎಂ.ಎಸ್ ಕಟ್ಟಡ,
ಬೆಂಗಳೂರು-560001.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











