RDWSD Bagalkot Recruitment 2021: 5 ಕಲೆಕ್ಟರ್ ಮತ್ತು ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯಲ್ಲಿ 5 ಕಲೆಕ್ಟರ್ ಮತ್ತು ಅನಾಲಿಸ್ಟ್ ಹುದ್ದೆಗಳ ನೇಮಕಾತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬಾಗಲಕೋಟೆ ಹಾಗೂ ಅದರ ಅಡಿಯಲ್ಲಿ ಬರುವ ಉಪ-ವಿಭಾಗ ಕಚೇರಿಗಳಲ್ಲಿ ಖಾಲಿ ಇರುವ 5 ಹಿರಿಯ/ಕಿರಿಯ ಅನಾಲಿಸ್ಟ್ ಮತ್ತು ಮಾದರಿ ಸಂಗ್ರಹಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೇ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಬಿ.ಎಸ್ಸಿ, ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಅನಾಲಿಸ್ಟ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ಕಲೆಕ್ಟರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಸೀನಿಯರ್ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ, ಜ್ಯೂನಿಯರ್ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ಮತ್ತು ಕಲೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://english.swachhamevajayate.org/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇ 1,2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Office of executive engineer,
Rural drinking water and sanitation department,
Bagalkot,
Karnataka.

ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬಾಗಲಕೋಟೆಯಲ್ಲಿ 5 ಕಲೆಕ್ಟರ್ ಮತ್ತು ಅನಾಲಿಸ್ಟ್ ಹುದ್ದೆಗಳ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
RDWSD bagalkot recruitment 2021 notification has been released for 5 collector and analyst posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X