ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಿರ್ದೇಶಕ ಮತ್ತು ರಾಜ್ಯ ತಾಂತ್ರಿಕ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯ್ನು ಓದಿಕೊಳ್ಳಿ ನಂತರ ಫೆಬ್ರವರಿ 25,2022ರೊಳಗೆ ಅರ್ಜಿಯನ್ನು ಹಾಕಿ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
RDWSD ನೇಮಕಾತಿ 2022 ವಿದ್ಯಾರ್ಹತೆ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ನಿರ್ದೇಶಕ ಮತ್ತು ರಾಜ್ಯ ತಾಂತ್ರಿಕ ಸಂಯೋಜಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
RDWSD ನೇಮಕಾತಿ 2022 ವಯೋಮಿತಿ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ನಿರ್ದೇಶಕ ಮತ್ತು ರಾಜ್ಯ ತಾಂತ್ರಿಕ ಸಂಯೋಜಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ ೫೦ ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
RDWSD ನೇಮಕಾತಿ 2022 ವೇತನ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ನಿರ್ದೇಶಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1.50 ಲಕ್ಷ ಮತ್ತು ರಾಜ್ಯ ತಾಂತ್ರಿಕ ಸಂಯೋಜಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 1.30 ಲಕ್ಷ ವೇತನವನ್ನು ನೀಡಲಾಗುವುದು.
RDWSD ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ನಿರ್ದೇಶಕ ಮತ್ತು ರಾಜ್ಯ ತಾಂತ್ರಿಕ ಸಂಯೋಜಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
RDWSD ನೇಮಕಾತಿ 2022 ಅರ್ಜಿ ಶುಲ್ಕ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ನಿರ್ದೇಶಕ ಮತ್ತು ರಾಜ್ಯ ತಾಂತ್ರಿಕ ಸಂಯೋಜಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
RDWSD ನೇಮಕಾತಿ 2022 ಅರ್ಜಿ ಸಲ್ಲಿಕೆ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯ ನಿರ್ದೇಶಕ ಮತ್ತು ರಾಜ್ಯ ತಾಂತ್ರಿಕ ಸಂಯೋಜಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಫೆಬ್ರವರಿ 25,2022ರೊಳಗೆ ಅರ್ಜಿಯನ್ನು ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ಡ್/ಕೊರಿಯರ್ ಮೂಲಕ ತಲುಪಿಸಬಹುದು.
ಕಚೇರಿ ವಿಳಾಸ:
Commissioner, Rural Drinking Water and Sanitation Department, 2nd floor, ‘E' Block, KHB Complex, Cauvery Bhavan, Bengaluru - 560009.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications