ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

05 ಆದೇಶ ಜಾರಿಕಾರರು ಹಾಗೂ 26 ಸಿಪಾಯಿ ಹುದ್ದೆಗಳು ಖಾಲಿ ಇದ್ದು, ಅಧಿಸೂಚನೆಯಲ್ಲಿ ಲಗತ್ತಿಸಿರುವ ನಿಗದಿತ ನಮೂನೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿ ಸೂಚಿಸಿದೆ.

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ- ಜಾರಿಕಾರರ ಹಾಗೂ ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

05 ಆದೇಶ ಜಾರಿಕಾರರು ಹಾಗೂ 26 ಸಿಪಾಯಿ ಹುದ್ದೆಗಳು ಖಾಲಿ ಇದ್ದು, ಅಧಿಸೂಚನೆಯಲ್ಲಿ ಲಗತ್ತಿಸಿರುವ ನಿಗದಿತ ನಮೂನೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿ ಸೂಚಿಸಿದೆ.

ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ  ನೇಮಕಾತಿ

ಹುದ್ದೆಗಳ ವಿವರ

ಆದೇಶ ಜಾರಿಕಾರರು-05 ಹುದ್ದೆಗಳು

ವೇತನ ಶ್ರೇಣಿ-ರೂ.11000-19000/-

ವಿದ್ಯಾರ್ಹತೆ

  • ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರುಬೇಕು
  • ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿರುವ ಅಭ್ಯರ್ಥಿಗಳಿಗೆ ಆಧ್ಯತೆ ನೀಡಲಾಗುವುದು.

ಆಯ್ಕೆಯ ವಿಧಾನ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಗರಿಷ್ಠ ಅಂಕಗಳನ್ನು ಆಧಾರಿಸಿ 1 ಹುದ್ದೆಗೆ 25 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು.

ಸಿಪಾಯಿ (ಜವಾನರು)-26 ಹುದ್ದೆಗಳು

ವೇತನ ಶ್ರೇಣಿ: ರೂ.9600-14550/-

ವಿದ್ಯಾರ್ಹತೆ

  • ಏಳನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು
  • ಕನ್ನಡ ಓದಲು ಮತ್ತು ಬರೆಯಲು ಬರಬೇಕು
  • ಎಲೆಕ್ಟ್ರಿಕಲ್ ಮತ್ತು ಕಾರ್ಪೆಂಟರ್ ಕೆಲಸಗಳಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಆಯ್ಕೆಯ ವಿಧಾನ

ಏಳನೇ ತರಗತಿಯಲ್ಲಿನ ಗರಿಷ್ಠ ಅಂಕಗಳನ್ನು ಆಧರಿಸಿ 1 ಹುದ್ದೆಗೆ 10 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು.

ವಯೋಮಿತಿ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35
  • 2A, 2B, 3A, 3B ಅಭ್ಯರ್ಥಿಗಳಿಗೆ 18 ರಿಂದ 38
  • ಎಸ್ಸಿ ಮತ್ತು ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ
  • ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ,ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-08-2017

ಅರ್ಜಿ ಸಲ್ಲಿಸುವ ವಿಳಾಸ

ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರವರ ನ್ಯಾಯಾಲಯ, ಯಾದಗಿರಿ ಜಿಲ್ಲೆ, ಯಾದಗಿರಿ ಈ ವಿಳಾಸಕ್ಕೆ ಕಳುಹಿಸತಕ್ಕದ್ದು.

ಅಭ್ಯರ್ಥಿಯು ಅರ್ಜಿಯ ಜೊತೆಯಲ್ಲಿ 5-00 ರೂ.ಗಳ ಅಂಚೆ ಚೀಟಿ ಲಗತ್ತಿಸಿರುವ ಸ್ವವಿಳಾಸವಿರುವ ಲಕೋಟೆಯನ್ನು ಲಗತ್ತಿಸತಕ್ಕದ್ದು. ಹಾಗೂ ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ ಎನ್ನುವುದನ್ನು ದಪ್ಪ ಅಕ್ಷರದಲ್ಲಿ ಲಕೋಟೆ ಮೇಲೆ ನಮೂದಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ecourts.gov.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Yadagiri district court invites applications for direct recruitment for the Post Process Servers and Peons of Yadgir Unit.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X