ಕುಲಪತಿಗಳ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ

Posted By:

ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕುಲಪತಿಗಳ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ.

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಇಲ್ಲಿನ ಕುಲಪತಿಯವರ ಹುದ್ದೆಗೆ ನೇಮಕ ಹೊಂದಲು ಬಯಸುವ ಅರ್ಹ ಅಭ್ಯರ್ಥಿಗಳಿಂದ ಸರ್ಕಾರದ ಅಧಿಸೂಚನೆ ಸಂಖ್ಯೆ ಪಸಂಮೀ 200 ಪಅಸೇ 2016 , ದಿನಾಂಕ 22 -02 -2017 ರಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಹತೆ

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪಶು ವೈದ್ಯಕೀಯ ವಿಜ್ಞಾನ/ಪಶುವಿಜ್ಞಾನ/ ಹೈನುವಿಜ್ಞಾನ/ಮೀನುಗಾರಿಕೆ ವಿಜ್ಞಾನ ಹಾಗೂ ಈ ಸಂಬಂಧಿತ ಕ್ಷೇತ್ರದಲ್ಲಿ ಪ್ರಾಧ್ಯಾಪಕ ಅಥವಾ ತತ್ಸಮಾನ ವೃಂದದಲ್ಲಿ 10 ವರ್ಷ ಅಥವಾ ಅದಕ್ಕೂ ಮೇಲ್ಪಟ್ಟ ಅವಧಿಗೆ ಸೇವೆ ಸಲ್ಲಿಸಿರತಕ್ಕದ್ದು.

ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು/ಅಧಿಕಾರಿಗಳು ತಮ್ಮ ಸಂಪೂರ್ಣ ಸೇವಾ ವಿವರಗಳುಳ್ಳ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ, ಅವಶ್ಯವಿರುವ ವಿವರ/ದಾಖಲೆಗಳೊಂದಿಗೆ ಆರು ಪ್ರತಿಗಳಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ನಂ 405 , ನಾಲ್ಕನೇ ಮಹಡಿ ವಿಕಾಸ ಸೌಧ, ಬೆಂಗಳೂರು-560001 ರವರಿಗೆ ಈ ಜಾಹೀರಾತು ಪ್ರಕಟಣೆಯಾದ ಹದಿನೈದು ದಿನಗಳೊಳಗಾಗಿ ಸಲ್ಲಿಸತಕ್ಕದ್ದು

ಅರ್ಜಿ ಸಲ್ಲಿಸಲು ನಿಗದಿಪಡಿಸಲ್ಗಿರುವ ನಮೂನೆಯನ್ನು ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಲಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ನಲ್ಲಿ ಪಡೆಯಬೇಕು.

ವೆಬ್-ಸೈಟ್ ವಿಳಾಸ http://kvafsu.edu.in/

ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ

ಡೈರಿ ಮತ್ತು ಮೀನುಗಾರಿಕೆ ಬೆಳವಣಿಗೆಯ ಪ್ರಧಾನ ಅಭಿವೃದ್ಧಿಯಲ್ಲಿ ಆಗುತ್ತಿರುವ ನಷ್ಟವನ್ನು ಸರಿ ಹೊಂದಿಸಲು ಕೃಷಿ ವಿಶ್ವವಿದ್ಯಾಲಯಗಳ ಅಡಿಯಲ್ಲಿ , ಕರ್ನಾಟಕ ಸರ್ಕಾರ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಎಂಬ ಹೊಸ ವಿಶ್ವವಿದ್ಯಾಲಯ ಸ್ಥಾಪಿಸುವಲ್ಲಿ ದಿಟ್ಟ ಕ್ರಮಗಳನ್ನು ತೆಗೆದುಕೊಂಡಿತು.

ಕೃಷಿಯಲ್ಲಿ ಶಿಕ್ಷಣ ಮತ್ತು ಕಲಿಕೆಯನ್ನು ಅಭಿವೃದ್ದಿಪಡಿಸುವ ಉದ್ದೇಶದಿಂದ ಈ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗಿದ್ದು; ಪಶುವೈದ್ಯಕೀಯ, ಪ್ರಾಣಿ, ಡೈರಿ ಮತ್ತು ಕರ್ನಾಟಕದ ಮೀನುಗಾರಿಕೆ ವಿಜ್ಞಾನ ಕ್ಷೇತ್ರಗಳಲ್ಲಿ ಗ್ರಾಮೀಣ ಆಧಾರಿತ ತಂತ್ರಜ್ಞಾನಗಳ ಪರಿಚಯ ಮತ್ತು ವರ್ಗಾವಣೆ, ಕೃಷಿಯಲ್ಲಿ ಸಂಶೋಧನೆ ಮತ್ತು ಕೃಷಿ ಕ್ಷೇತ್ರದ ವಿಸ್ತರಣೆಯ ಮೂಲ ಉದ್ದೇಶವನ್ನು ಇದು ಹೊಂದಿದೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್-ಸೈಟ್ ವಿಳಾಸ ನೋಡಿ. http://kvafsu.edu.in/

English summary
recruitment notification for the post of vice chancellor

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia