ಮಂಡ್ಯ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
33 ಅಂಗನವಾಡಿ ಕಾರ್ಯಕರ್ತರು ಹಾಗೂ 92 ಅಂಗನವಾಡಿ ಸಹಾಯಕ ಒಟ್ಟು 125 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಮತ್ತು ಆಸಕ್ತರು ದಿನಾಂಕ 11-12-2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ವಯೋಮಿತಿ
ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವಿದ್ಯಾರ್ಹತೆ
ಅಂಗನವಾಡಿ ಕಾರ್ಯಕರ್ತರು ಹುದ್ದೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಇನ್ನು ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿಯಾದರೂ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಹಾಯವಾಣಿಯನ್ನು ಸಂಪರ್ಕಿಸಲು ಕೋರಲಾಗಿದೆ.
1 ಶ್ರೀರಂಗಪಟ್ಟಣ 08236-252349
2 ಪಾಂಡವಪುರ 08236-255642
3 ನಾಗಮಂಗಲ 08234-286072
4 ಮಳವಳ್ಳಿ 08231-242004
5 ಮದ್ದೂರು 08232-233814
6 ಮಂಡ್ಯ 08232-227709
7 ದುಡ್ಡ 08232-227709
8 ಕೃಷ್ಣರಾಜ ಪೇಟೆ 08230-262627
ಪ್ರಮುಖ ದಿನಾಂಕಗಳು
- ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-12-2017
- ಅರ್ಜಿ ಪರಿಶೀಲನೆ ನಡೆಯುವ ದಿನಾಂಕ: 12-12-2017 ರಿಂದ 14-12-2017 ರವರೆಗೆ
- ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ: 26-12-2017 ರಿಂದ 28-12-2017 ರವರೆಗೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











