ಕಲ್ಬುರ್ಗಿ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಕಾರರ ಹುದ್ದೆಗಳ ನೇಮಕಾತಿ

Posted By:

ಕಲ್ಬುರ್ಗಿ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಿಂಬಾಕಿ ಶೀಘ್ರಲಿಪಿಕಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ನಮೂನೆಯಲ್ಲಿ ದಿನಾಂಕ 01 -02 -2017 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಮೊದಲು ಹೊರಡಿಸಿದ್ದ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿ ಮಾರ್ಚ್ 02,2017 ಅನ್ನು ನಿಗದಿ ಪಡಿಸಲಾಗಿತ್ತು ಆದರೆ ಈಗ ದಿನಾಂಕವನ್ನು 20-03-2017 ರವರೆಗೂ ವಿಸ್ತರಿಸಲಾಗಿದೆ. ಅಲ್ಲದೇ ಸ್ಥಳೀಯ ವೃಂದದ ಹುದ್ದೆಗಳನ್ನು ಏರಿಕೆ ಮಾಡಲಾಗಿದೆ.

ಕಲ್ಬುರ್ಗಿ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರರ ನೇಮಕಾತಿ

 ಹುದ್ದೆಗಳ ವಿವರ

ಹುದ್ದೆಯ ಹೆಸರು : ಶೀಘ್ರಲಿಪಿಕಾರರು

ಹುದ್ದೆಗಳ ಸಂಖ್ಯೆ: 11 (ಸ್ಥಳೀಯ ವೃಂದ 08 + ಉಳಿಕೆ ಮೂಲ ವೃಂದ 03)

ವೇತನ ಶ್ರೇಣಿ

14550 -26700 ಹಾಗೂ ಲಭ್ಯವಿರುವ ಇತರೆ ಭತ್ಯೆಗಳು.

ವಿದ್ಯಾರ್ಹತೆ

ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಹಿರಿಯ ಶ್ರೇಣಿ ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಡಿಪ್ಲೋಮ ಇನ್ ಕಮರ್ಷಿಯಲ್/ಸೆಕ್ರೆಟೆರಿಯಲ್ ಪ್ರಾಕ್ಟೀಸ್ ತೇರ್ಗಡೆಯಾಗಿರಬೇಕು.

ಆಯ್ಕೆ ವಿಧಾನ

ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ಭಾಷೆಯಲ್ಲಿ ನಿಮಿಷ ಒಂದಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ತರ್ಜುಮೆ ಮಾಡಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಟಿಪ್ಪಣಿ

ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ತೇರ್ಗಡೆಯಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು. ಸಂದರ್ಶನವು 05 ಅಂಕಗಳನ್ನೊಳಗೊಂಡಿರುತ್ತದೆ.

ವಯೋಮಿತಿ

20 -03 -2017 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು,
ಗರಿಷ್ಠ ವಯೋಮಿತಿ
ಸಾಮಾನ್ಯ ವರ್ಗ: 35
ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
ಪ.ಜಾ, ಪ.ಪಂ, ಪ್ರ-1 : 40 ವರ್ಷ

ಪರಿವೀಕ್ಷಣಾ ಅವಧಿ

ಆಯ್ಕೆಯಾದ ಅಭ್ಯಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ಅರ್ಜಿ ಸಲ್ಲಿಸುವ ವಿಧಾನ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು https://www.onlinesbi.com/prelogin/icollecthome.htm?corpID=383244 ವೆಬ್ ಲಿಂಕ್ ಮೂಲಕ ಆನ್ಲೈನ್ ಮಾರ್ಗವಾಗಿ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳು ರೂ.200 /- (ಎಸ್,ಸಿ/ಎಸ್.ಟಿ/ಪ್ರ-1 /ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ ) ಅರ್ಜಿ ಶುಲ್ಕವನ್ನು ಆನ್ಲೈನ್ (ಡೆಬಿಟ್/ಕ್ರೆಡಿಟ್ ಕಾರ್ಡ್ ಬಳಸಿ) ಅಥವಾ ಎಸ್ ಬಿ ಐ ಚಲನ್ ಡೌನ್ಲೋಡ್ ಮಾಡಿಕೊಂಡು ಎಸ್ ಬಿ ಐ ಶಾಖೆಯಲ್ಲಿ ನಗದು ಪಾವತಿಸುವ ಮೂಲಕ ಸಂದಾಯ ಮಾಡತಕ್ಕದ್ದು.
ಆನ್ಲೈನ್ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ 20-03 -2017
ಚಲನ್ ಮೂಲಕ ಶುಲ್ಕ ಪಾವತಿಸಲು ಕಡೆಯ ದಿನಾಂಕ 22-03-2017
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ http://www.ecourts.gov.in/india/karnataka/kalaburagi/recruitment

English summary
RECRUITMENT TO THE POST OF STENOGRAPHER IN THE COURT OF THE DISTRICT & SESSIONS JUDGE AT KALABURAGI.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia