ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಬಾಗಲಕೋಟೆ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 58 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ನೇಮಕಾತಿಯ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 4,2019ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಗ್ರಾಮಲೆಕ್ಕಿಗ |
| Organisation | ಕಂದಾಯ ಇಲಾಖೆ |
| Educational Qualification | 12ನೇ ತರಗತಿ / ದ್ವಿತೀಯ ಪಿಯುಸಿ |
| Job Location | ಬಾಗಲಕೋಟೆ (ಕರ್ನಾಟಕ) |
| Salary Scale | ರೂ.21,400/- ರಿಂದ 42,000/-ರೂ ವೇತನ |
| Application Start Date | June 4, 2019 |
| Application End Date | July 4, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ:
ಕನಿಷ್ಟ 18 ರಿಂದ ಸಾಮಾನ್ಯ ಅಭ್ಯರ್ಥಿಗಳು ಗರಿಷ್ಟ 35 ವರ್ಷ, 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು ಗರಿಷ್ಟ 38 ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್.ಇ ಅಥವಾ ಐ.ಸಿ.ಎಸ್.ಇ ನಡೆಸುವ ೧೨ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ
ಮಾಡಲಾಗುವುದು.
ಅರ್ಜಿ ಶುಲ್ಕ:
| ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ | ರೂ.50/- |
| ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ | ರೂ.200/- |
ಅಭ್ಯರ್ಥಿಗಳು ಇಲ್ಲಿ ತಿಳಿಸಲಾಗಿರುವ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆಯ ಅಧಿಕೃತ ವೆಬ್‌ಸೈಟ್ https://bagalkot.nic.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 4,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











