ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿಯ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 27,2019ರ ಸಂಜೆ 5:30 ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಗ್ರಾಮಲೆಕ್ಕಾಧಿಕಾರಿ  ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಗ್ರಾಮಲೆಕ್ಕಿಗ
Organisation ಕಂದಾಯ ಇಲಾಖೆ
Educational Qualification 12ನೇ ತರಗತಿ / ದ್ವಿತೀಯ ಪಿಯುಸಿ
Job Location ಚಿಕ್ಕಬಳ್ಳಾಪುರ ಜಿಲ್ಲೆ (ಕರ್ನಾಟಕ)
Salary Scale 21,400/- ರಿಂದ 42,000/-ರೂ ವೇತನ
Application Start Date June 27, 2019
Application End Date July 27, 2019

<strong>ಕರ್ನಾಟಕ ಬ್ಯಾಂಕ್ ನೇಮಕಾತಿ 2019: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>ಕರ್ನಾಟಕ ಬ್ಯಾಂಕ್ ನೇಮಕಾತಿ 2019: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಗಣಕಯಂತ್ರ ನಿರ್ವಹಣೆ ಬಗ್ಗೆ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.

ವಯೋಮಿತಿ:

ಕನಿಷ್ಟ 18 ರಿಂದ 40 ವರ್ಷ ವಯೋಮಿತಿಯೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿಧವೆ / ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸಶಸ್ತ್ರ ದಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವವರೋ ಅದಕ್ಕೆ 3ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಪರಿಶಿಷ್ಟ ಪಂಗಡ,ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ.100/-ರೂ ಗಳನ್ನು ಜಿಲ್ಲಾಧಿಕಾರಿಗಳು,ಚಿಕ್ಕಬಳ್ಳಾಪು ಜಿಲ್ಲೆ ರವರ State Bank of india, Chikkaballapur ಶಾಖೆಯಲ್ಲಿನ ಉಳಿತಾಯ ಖಾತೆ: 64030323576 ಗೆ (IFSC Code SBIN 0040082) ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮುಂಚೆ ಪಾವತಿ ಮಾಡಿ ಚಲನ್ ಸಂಖ್ಯೆಯನ್ನು ಅರ್ಜಿಯಲ್ಲಿ ದಿನಾಂಕದ ಸಹಿತ ತಪ್ಪದೇ ನಮೂದಿಸುವುದು. ಆನ್‌ಲೈನ್ ಮೂಲಕ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಜುಲೈ 28,2019ಕೊನೆಯ ದಿನವಾಗಿರುತ್ತದೆ.

<strong>ಭಾರತೀಯ ಸೇನೆ 55 ಎನ್‌ಸಿಸಿ ವಿಶೇ‍ಷ ಪ್ರವೇಶ ಸ್ಕೀಮ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ</strong>ಭಾರತೀಯ ಸೇನೆ 55 ಎನ್‌ಸಿಸಿ ವಿಶೇ‍ಷ ಪ್ರವೇಶ ಸ್ಕೀಮ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ

ಅರ್ಜಿ ಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಚಿಕ್ಕಬಳ್ಳಾಪು ಜಿಲ್ಲೆಯ ಅಧಿಕೃತ ವೆಬ್‌ಸೈಟ್‌ https://chikkaballapur.nic.in/en/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 27,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
Chikkaballapur District Recruitment 2019-20:Apply Online for 01 Village Accountant Vacancies. Chikkaballapur District invited Online applications from eligible and interested candidates to fill up Village Accountant Post through Chikkaballapur District official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X