ಹಾಸನ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 21 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಹಾಸನ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 21 ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜುಲೈ 1,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಗ್ರಾಮಲೆಕ್ಕಿಗ
Organisation ಕಂದಾಯ ಇಲಾಖೆ
Educational Qualification 12ನೇ ತರಗತಿ / ದ್ವಿತೀಯ ಪಿಯುಸಿ,ಐಟಿಐ
Job Location ಹಾಸನ (ಕರ್ನಾಟಕ)
Salary Scale 21,400/- ರಿಂದ 42,000/-ರೂ ವೇತನ
Application Start Date June 17, 2019
Application End Date July 1, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ ಇ ಅಥವಾ ಐಸಿಎಸ್ ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಜೆ.ಓ.ಸಿ./ಐ.ಟಿ.ಐ ಹಾಗೂ ಇತರೆ ತತ್ಸಮಾನ ಪರೀಕ್ಷೆಗಳು ಹಾಗೂ ಮುಕ್ತ ವಿಶ್ವವಿದ್ಯಾಲಯಗಳಿಂದ ಪಡೆದಿರುವ ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದೆ.

ವಯೋಮಿತಿ:

ಜುಲೈ 1,2019 ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-2A,2B,3A,3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ ಸಿ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ವರ್ಗದ ಅಭ್ಯರ್ಥಿಗಳು 300/-ರೂ,2A,2B,3A,3B,ಮಹಿಳೆ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 150/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳು 25/-ರೂ ಅಜರ್ಜಿ ಶುಲ್ಕವನ್ನು ಚಲನ್ ಮೂಲಕ ಜುಲೈ 2ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದಾಗಿದೆ. ಅರ್ಜಿಗಳನ್ನು ಖುದ್ದಾಗಿ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ ಸೈಟ್ http://hassan-va.kar.nic.in/ ತೆರೆದು ಕಂಪ್ಯೂಟರ್ ಪರದೆಯ ಮೇಲೆ ಅರ್ಜಿಯನ್ನು ತುಂಬಬೇಕು ಹಾಗೂ ಇತ್ತೀಚಿನ ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಬೇಕು. ನಂತರ ಅಭ್ಯರ್ಥಿಯು submit button ಅನ್ನು ಒತ್ತಿದರೆ ಅರ್ಜಿ ಸಂಖ್ಯೆ (Reference Number) ಸೃಷ್ಟಿಯಾಗುತ್ತದೆ. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಸ್ವೀಕೃತಿ ಪತ್ರ (Acknowledgement slip) ಮತ್ತು ದ್ವಿ ಪ್ರತಿ ಚಲನ್ ಅನ್ನು ತೆಗೆದುಕೊಳ್ಳತಕ್ಕದ್ದು. ಕಂಪ್ಯೂಟರ್‌ನಲ್ಲಿ ಮುದ್ರಿಸಿದ ಚಲನ್‌ನ ಕೌಂಟರ್ ಫೈಲನ್ನು ಸ್ಕ್ಯಾನ್‌ ಮಾಡಿ ಇದೇ ವೆಬ್‌ ಸೈಟಿನಲ್ಲಿ ಚಲನ್ ಸಂಖ್ಯೆ, ದಿನಾಂಕಗಳೊಂದಿಗೆ ಅಪ್‌ಲೋಡ್ ಮಾಡುವುದು. ಅಭ್ಯರ್ಥಿಗಳು ಸ್ವೀಕೃತಿ ಸ್ಲಿಪನ್ನು ಮತ್ತು ಚಲನ್ ಪಾವತಿಯ ಒಂದು ಪ್ರತಿಯನ್ನು ಕಡ್ಡಾಯವಾಗಿ ತಮ್ಮ ಬಳಿ ಇರಿಸಿಕೊಳ್ಳತಕ್ಕದ್ದು.ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Hassan Revenue Department Recruitment 2019-20:Apply Online for 21 Village Accountant Vacancies. Hassan Revenue Department invited Online applications from eligible and interested candidates to fill up Village Accountant Posts through Hassan Revenue Department official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+